ಹರಿಹರ: ನಗರದಲ್ಲಿ ಶುಕ್ರವಾರ ಬೆಳಿಗ್ಗೆ ಒಂದು ಗಂಟೆ ಸುರಿದ ಭಾರಿ ಮಳೆಗೆ ನಗರದ ಪ್ರಮುಖ ರಸ್ತೆಗಳು ಕೆರೆಯಂತಾಗಿದ್ದರೆ, ಅಲ್ಲಲ್ಲಿ ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ಪರದಾಡುವಂತಾಯಿತು.

ಮಳೆಗಾಲಕ್ಕೂ ಮುನ್ನ ನಗರಸಭೆ ಅಧಿಕಾರಿಗಳು ಮನ್ನೆಚ್ಚರಿಕೆ ವಹಿಸಿ ಚರಂಡಿಗಳನ್ನು ಸ್ವಚ್ಛಗೊಳಿಸದ ಕಾರಣ, ಕಸಕಡ್ಡಿ ಅಡ್ಡಲಾಗಿ ಚರಂಡಿಗಳು ಮುಚ್ಚಿದ್ದವು. ಆದ್ದರಿಂದ ಮಳೆ ನೀರು ರಸ್ತೆಯ ಮೇಲೆ ಹರಿದು ವಾಹನ ಸವಾರರು ಹಾಗೂ ಸಾರ್ವಜನಿಕರು ಪರದಾಡುವಂತಾಯಿತು.

ನಗರದ ಹರಪನಹಳ್ಳಿ ರಸ್ತೆಯ ರೈಲ್ವೆ ಕೆಳಸೇತುವೆ ಬಳಿ ಮಳೆ ನೀರು ನಿಂತು ವಾಹನ ಸಂಚಾರ ದುಸ್ತರವಾಗಿತ್ತು. ಬೆಂಕಿನಗರ ಸೇರಿದಂತೆ ತಗ್ಗು ಪ್ರದೇಶದ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಹೈರಾಣಾದ ನಿವಾಸಿಗಳು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಲೇ ಮನೆಯೊಳಗಿನ ನೀರು ಹೊರಹಾಕುವ ದೃಶ್ಯ ಕಂಡುಬಂದಿತು.

ಶಾಸಕರಿಂದ ಪರಿಶೀಲನೆ: ಮಳೆಯಿಂದ ಹಾನಿಗೀಡಾದ ನಗರದ ವಿವಿಧ ಪ್ರದೇಶಗಳಿಗೆ ಶಾಸಕ ಬಿ.ಪಿ. ಹರೀಶ್ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಘಟಕದ ಅಧ್ಯಕ್ಷ ನಂದಿಗಾವಿ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮುಂದಿನ ದಿನಗಳಲ್ಲಿ ಇನ್ನಷ್ಟು ಮಳೆಯಾಗಲಿದ್ದು, ಇಂತಹ ಸಮಸ್ಯೆಗಳು ಮರುಕಳಿಸದಂತೆ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಹರೀಶ್ ಕಟ್ಟುನಿಟ್ಟಿನ ಸೂಚನೆ ನೀಡಿದರು.

ತರಕಾರಿ ವ್ಯಾಪಾರಿಗಳ ಮನವಿ: ಹಳೇ ಕೋರ್ಟ್ ಸಮೀಪದ ಸಗಟು ತರಕಾರಿ ವ್ಯಾಪಾರಿಗಳು ಶಾಸಕರಿಗೆ ಮನವಿ ಸಲ್ಲಿಸಿದರು. ‘ಪಕ್ಕದ ಗಾಂಧಿ ಮೈದಾನದ ಮಳೆ ನೀರು ನೇರವಾಗಿ ಮಾರುಕಟ್ಟೆಗೆ ನುಗ್ಗಿ ತೀವ್ರ ತೊಂದರೆಯಾಗುತ್ತಿದೆ. ಆದ್ದರಿಂದ ಮೈದಾನದ ಪಶ್ಚಿಮ ಭಾಗದಲ್ಲಿ ಸೂಕ್ತ ಚರಂಡಿ ನಿರ್ಮಿಸಿಕೊಡಬೇಕು’ ಎಂದು ಆಗ್ರಹಿಸಿದರು.

ನಗರಸಭೆ ಪೌರಾಯುಕ್ತೆ ಈರಮ್ಮ, ಎಇಇ ವಿನಯ್ ಕುಮಾರ್ ಹಾಗೂ ನಗರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-43-860011148

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.