ಬುಧವಾರ, 12 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರಿಹರ: ಕರವೇಯಿಂದ ಕನ್ನಡ ರಾಜ್ಯೋತ್ಸವ 30ರಂದು

Published 26 ನವೆಂಬರ್ 2023, 16:12 IST
Last Updated 26 ನವೆಂಬರ್ 2023, 16:12 IST
ಅಕ್ಷರ ಗಾತ್ರ

ಹರಿಹರ: ನಗರದಲ್ಲಿ ನವೆಂಬರ್‌ 30ರಂದು ಕರ್ನಾಟಕ ರಕ್ಷಣಾ ವೇದಿಕೆಯಿಂದ ಹಮ್ಮಿಕೊಂಡಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಕರವೇ ರಾಜ್ಯ ಘಟಕದ ಅಧ್ಯಕ್ಷ ಪ್ರವೀಣ ಶೆಟ್ಟಿ ಆಗಮಿಸಲಿದ್ದಾರೆ ಎಂದು ಕರವೇ ತಾಲ್ಲೂಕು ಘಟಕ ಅಧ್ಯಕ್ಷ ರಮೇಶ್ ಮಾನೆ ಹೇಳಿದರು.

ನಗರದ ಕಸಬಾ ಗ್ರಾಮದೇವತೆ ದೇವಸ್ಥಾನದ ಹಿಂಭಾಗದ ವೇದಿಕೆಯಲ್ಲಿ ಅಂದು ಸಂಜೆ 4.30ಕ್ಕೆ ಶಾಸಕ ಬಿ.ಪಿ.ಹರೀಶ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಪ್ರವೀಣ ಶೆಟ್ಟಿ ಪ್ರಸ್ತಾವಿಕ ನುಡಿಗಳ್ನಾಡಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.

ಸಂಸದ ಜಿ.ಎಂ.ಸಿದ್ದೇಶ್ವರ, ಮಾಜಿ ಶಾಸಕರಾದ ಎಸ್.ರಾಮಪ್ಪ, ಎಚ್.ಎಸ್.ಶಿವಶಂಕರ್, ಮುಖಂಡರಾದ ಬಿ.ಜಿ.ವಿನಯ್ ಕುಮಾರ್, ನಂದಿಗಾವಿ ಶ್ರೀನಿವಾಸ್, ಚಂದ್ರಶೇಖರ್ ಪೂಜಾರ್, ಶಶಿಕುಮಾರ್ ಮೆರ‍್ವಾಡೆ ನಗರಸಭಾ ಸದಸ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದರು.

ನಗರ ಘಟಕದ ಅಧ್ಯಕ್ಷ ಪ್ರೀತಮ್ ಬಾಬು ಮಾತನಾಡಿ, ಅಂದು ಬೆಳಿಗ್ಗೆ 8.30ಕ್ಕೆ ನಗರದ ಜೆ.ಸಿ.ಬಡಾವಣೆಯ 1ನೇ ಮುಖ್ಯ ರಸ್ತೆ, 4ನೇ ಅಡ್ಡ ರಸ್ತೆಯಲ್ಲಿ ನಗರಸಭೆ ಮಾಜಿ ಅಧ್ಯಕ್ಷೆ ನಿಂಬಕ್ಕ ಚಂದಾಪುರ ಧ್ವಜಾರೋಹಣ ನೆರವೇರಿಸುವರು ಎಂದರು.

ವಿವಿಧ ಕ್ಷೇತ್ರಗಳ 12 ಜನ ಸಾಧಕರಿಗೆ ಸನ್ಮಾನಿಸಿದ ನಂತರ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದರು.

ಪದಾಧಿಕಾರಿಗಳಾದ ಎಂ.ಎನ್.ಸಿದ್ದಣ್ಣ, ಶಂಕರ್ ದುರುಗೋಜಿ, ಆಟೋ ರಾಜು, ಆಟೋ ರಮೇಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT