ಹರಿಹರ: ನಗರದ ಶಿವಮೊಗ್ಗ ರಸ್ತೆ ಬದಿಯ ಜಾಗದಲ್ಲಿ ದಶಕಗಳಿಂದ ನಡೆಯುತ್ತಿದ್ದ ವಾರದ ಸಂತೆಯನ್ನು ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಏಕಾಏಕಿ ಎಪಿಎಂಸಿ ಆವರಣಕ್ಕೆ ಸ್ಥಳಾಂತರಿಸಲು ಮುಂದಾದ ನಗರಸಭೆ ಅಧಿಕಾರಿಗಳ ಕ್ರಮವನ್ನು ಖಂಡಿಸಿ ಬೀದಿ ಬದಿ ವ್ಯಾಪಾರಸ್ಥರು ಮಂಗಳವಾರ ಪ್ರತಿಭಟನೆ ನಡೆಸಿದರು.

ಅಧಿಕಾರಿಗಳು ಹಾಗೂ ವ್ಯಾಪಾರಸ್ಥರ ನಡುವಿನ ವಾಗ್ವಾದದ ಬಳಿಕ, ಕಾಂಗ್ರೆಸ್ ಮುಖಂಡರ ಮಧ್ಯಪ್ರವೇಶದೊಂದಿಗೆ ಸ್ಥಳಾಂತರ ಪ್ರಕ್ರಿಯೆಗೆ ತಾತ್ಕಾಲಿಕ ತಡೆ ಬಿದ್ದಿದ್ದು, ಎಂದಿನಂತೆ ಹಳೇ ಜಾಗದಲ್ಲೇ ಸಂತೆ ಮುಂದುವರಿಯಿತು.

ದಿನೇದಿನೇ ಹೆಚ್ಚುತ್ತಿರುವ ಜನಸಂಖ್ಯೆ, ವಾಹನ ದಟ್ಟಣೆ ಹಾಗೂ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ, ಮೇ 26ರಂದು ಶಾಸಕರ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಾರ್ವಜನಿಕ ಕುಂದು– ಕೊರತೆ ಸಭೆಯಲ್ಲಿ ಸಂತೆಯನ್ನು ಎಪಿಎಂಸಿ ಆವರಣಕ್ಕೆ ಸ್ಥಳಾಂತರಿಸಲು ತೀರ್ಮಾನಿಸಲಾಗಿತ್ತು.

ಈ ನಿರ್ಧಾರದ ಬೆನ್ನಲ್ಲೇ ಹೆಚ್ಚಿನ ಚರ್ಚೆ, ವಿಮರ್ಶೆ ಇಲ್ಲದೆ ನಗರಸಭೆ ಅಧಿಕಾರಿಗಳು ಮಂಗಳವಾರ ಏಕಾಏಕಿ ಸ್ಥಳಾಂತರ ಕಾರ್ಯಾಚರಣೆಗೆ ಮುಂದಾಗಿದ್ದರು. ಅಧಿಕಾರಿಗಳ ದಿಢೀರ್ ನಡೆಯನ್ನು ತೀವ್ರವಾಗಿ ವಿರೋಧಿಸಿದ ವ್ಯಾಪಾರಸ್ಥರ ಸಂಘದ ಪದಾಧಿಕಾರಿಗಳು ಹಾಗೂ ನೂರಾರು ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದರು.

ನಗರಸಭೆಯು ಹೊಸದಾಗಿ ಗುರುತಿಸಿರುವ ಎಪಿಎಂಸಿ ಜಾಗವು ನಗರದಿಂದ ಅಂದಾಜು 2 ಕಿ.ಮೀ. ದೂರದಲ್ಲಿದೆ. ಅಲ್ಲಿ ಗ್ರಾಹಕರಿಗೆ ಬಂದು ಹೋಗಲು ಸೂಕ್ತ ಸಾರಿಗೆ ವ್ಯವಸ್ಥೆಯಿಲ್ಲ. ಜೊತೆಗೆ ಬೆಳಿಗ್ಗೆಯಿಂದ ಸಂಜೆವರೆಗೆ ವ್ಯಾಪಾರ ಮಾಡುವವರಿಗೆ ಕುಡಿಯುವ ನೀರು, ಶೌಚಾಲಯದಂತಹ ಕನಿಷ್ಠ ಮೂಲಸೌಕರ್ಯಗಳನ್ನೂ ಕಲ್ಪಿಸಿಲ್ಲ ಎಂದು ಕಿಡಿಕಾರಿದರು.

ವಿಷಯ ತಿಳಿದು ಸ್ಥಳಕ್ಕೆ ಬಂದ ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್, ಪ್ರತಿಭಟನಕಾರರ ಅಳಲು ಆಲಿಸಿದರು. ಕೂಡಲೇ ಜಿಲ್ಲಾಧಿಕಾರಿಗೆ ಕರೆ ಮಾಡಿ ವಾಸ್ತವ ಸ್ಥಿತಿಗತಿಯನ್ನು ಮನವರಿಕೆ ಮಾಡಿಕೊಟ್ಟರು. ಪರಿಸ್ಥಿತಿಯ ಗಂಭೀರತೆ ಅರಿತ ಜಿಲ್ಲಾಧಿಕಾರಿ, ಪರ್ಯಾಯ ವ್ಯವಸ್ಥೆ ಕಲ್ಪಿಸುವವರೆಗೆ ತಾತ್ಕಾಲಿಕವಾಗಿ ಹಳೇ ಜಾಗದಲ್ಲೇ ಸಂತೆ ಮುಂದುವರಿಸಲು ಮೌಖಿಕ ಸೂಚನೆ ನೀಡಿದರು.

ಬಳಿಕ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ನಂದಿಗಾವಿ ಶ್ರೀನಿವಾಸ್, ‘ಶೀಘ್ರ ಬೀದಿಬದಿ ವ್ಯಾಪಾರಸ್ಥರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು, ಯಾರಿಗೂ ತೊಂದರೆ ಆಗದಂತೆ ಸರ್ವಸಮ್ಮತ ತೀರ್ಮಾನ ಕೈಗೊಳ್ಳೋಣ. ಅಲ್ಲಿಯವರೆಗೆ ನೀವು ಇಲ್ಲೇ ವ್ಯಾಪಾರ ಮುಂದುವರಿಸಿ’ ಎಂದು ತಿಳಿಸಿದ್ದರಿಂದ ವ್ಯಾಪಾರಸ್ಥರು ಪ್ರತಿಭಟನೆ ಕೈಬಿಟ್ಟರು. ಬಳಿಕ ವಾರದ ಸಂತೆ ಎಂದಿನಂತೆ ಶಿವಮೊಗ್ಗ ರಸ್ತೆಯಲ್ಲಿ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-43-883948294

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.