ಹರಿಹರ: ತಾಲ್ಲೂಕಿನ ಮಿಟ್ಲಕಟ್ಟೆ ಗ್ರಾಮದ ಸಮೀಪ ಶುಕ್ರವಾರ ಸಂಭವಿಸಿದ ಬ್ಯಾಟರಿ ಚಾಲಿತ ಸ್ಕೂಟರ್ (ಇವಿ) ಅಪಘಾತದಲ್ಲಿ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.

ಮಲೇಬೆನ್ನೂರು ನಿವಾಸಿ ವಿಶ್ವನಾಥ ಬಿ.ಪಿ. ಅವರ ಪುತ್ರಿ, ದಾವಣಗೆರೆಯ ಯುಬಿಡಿಟಿ ಕಾಲೇಜಿನ ಎಂ.ಬಿ.ಎ. ವಿದ್ಯಾರ್ಥಿನಿ ಬಿ.ವಿ.ರಂಜಿತಾ (22) ಮೃತರು.

ವಿವರ: ಬೆಳಿಗ್ಗೆ 8ಕ್ಕೆ ಕಾಲೇಜಿಗೆ ತೆರಳುವಾಗ ಅವರ ಸ್ಕೂಟರ್ ಮಿಟ್ಲಕಟ್ಟೆ ಸಮೀಪದ ಶಂಕರ ಲೀಲಾ ಗ್ಯಾಸ್ ಏಜೆನ್ಸಿ ಮುಂಭಾಗ ಸ್ಕಿಡ್ ಆಗಿದೆ. ಕೆಳಕ್ಕೆ ಬಿದ್ದ ರಂಜಿತಾ ಅವರ ತಲೆ, ಗದ್ದ, ಮೂಗು ಹಾಗೂ ಇತರೆ ಕಡೆಗಳಲ್ಲಿ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವವಾಗಿದೆ.

ಸ್ಥಳದಲ್ಲಿದ್ದವರು ಕೂಡಲೇ ಅವರನ್ನು ಆಟೊದಲ್ಲಿ ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಪರೀಕ್ಷಿಸಿದ ವೈದ್ಯರು, ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ತಿಳಿಸಿದರು.

ಮಲೇಬೆನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-43-1944213968

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.