ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರಿಹರ ನಗರಸಭೆ: 21ನೇ ವಾರ್ಡ್‌ಗೆ ಐದು ನಾಮಪತ್ರ

Last Updated 16 ಡಿಸೆಂಬರ್ 2021, 4:14 IST
ಅಕ್ಷರ ಗಾತ್ರ

ಹರಿಹರ: ಇಲ್ಲಿನ ನಗರಸಭೆ 21ನೇ ವಾರ್ಡಿನ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಬುಧವಾರ ಕೊನೆ ದಿನವಾಗಿದ್ದು, ಮೂವರು ಅಭ್ಯರ್ಥಿಗಳಿಂದ ಐದು ನಾಮಪತ್ರ ಸಲ್ಲಿಕೆಯಾಗಿವೆ.

ಬಿಜೆಪಿಯಿಂದ ಕುಸುಮಾ ರಾಯ್ಕರ್ ಒಂದು ನಾಮಪತ್ರ, ಜೆಡಿಎಸ್‌ನಿಂದ ವಿದ್ಯಾ ರಾಘವೇಂದ್ರ ಸಾ ಹಾಗೂ ಕಾಂಗ್ರೆಸ್ ಅಭ್ಯರ್ಥಿ ನಗರಸಭೆ ಮಾಜಿ ಅಧ್ಯಕ್ಷೆ ಷಹಜಾದ್ ಸನಾಉಲ್ಲಾ ತಲಾ ಎರಡು ನಾಮಪತ್ರ ಸಲ್ಲಿಸಿದ್ದಾರೆ.

ಡಿ.16ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಡಿ.18ಕೊನೆ ದಿನ.

ಅಗತ್ಯವಿದ್ದಲ್ಲಿ ಡಿ.27ರಂದು ಬೆಳಿಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಡಿ.30ರಂದು ಬೆಳಿಗ್ಗೆ 8ರಿಂದ ಮತ ಎಣಿಕೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT