ಕಡರನಾಯ್ಕನಹಳ್ಳಿ: ಹೋಬಳಿ ಕೇಂದ್ರ ಮಲೇಬೆನ್ನೂರಿಗೆ ನಿತ್ಯ ತೆರಳುವ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಸರ್ಕಾರಿ ಬಸ್ ಸೌಲಭ್ಯ ಆರಂಭಿಸಲಾಗಿದ್ದು, ಈ ಭಾಗದ ಜನರ ಬಹು ದಿನಗಳ ಬೇಡಿಕೆ ಸಾಕಾರಗೊಂಡಿದೆ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದರು.

ಉಕ್ಕಡಗಾತ್ರಿ–ಮಲೇಬೆನ್ನೂರು ಮಾರ್ಗದಲ್ಲಿ ಕೆಎಸ್ಆರ್ಟಿಸಿ ನೂತನ ಬಸ್ ಮಾರ್ಗಕ್ಕೆ ಚಾಲನೆ ನೀಡಿ ಮಾತನಾಡಿದರು.

ಬಸ್ ಉಕ್ಕಡಗಾತ್ರಿಯಿಂದ ಹೊರಟು, ನಂದಿಗುಡಿ, ಕೊಕ್ಕನೂರು ಮಾರ್ಗವಾಗಿ ಮಲೇಬೆನ್ನೂರು ತಲುಪುತ್ತದೆ. ಇದೇ ಮಾರ್ಗದಲ್ಲಿ ವಾಪಸಾಗುತ್ತದೆ. ದಿನವೂ ನಾಲ್ಕು ಬಾರಿ ಓಡಾಡಲಿದೆ.

ಎಕ್ಕೆಗೊಂದಿ ಬಳಿ ಶಿವಮೊಗ್ಗ ಕಡೆಗೆ ಸಂಚರಿಸುವ ಬಸ್ಗಳ ನಿಲುಗಡೆಗೆ ವ್ಯವಸ್ಥೆ ಮಾಡುವಂತೆ ಸ್ಥಳೀಯರು ಬೇಡಿಕೆ ಇಟ್ಟಿದ್ದು, ಆದಷ್ಟು ಬೇಗ ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಶಾಸಕರು ಭರವಸೆ ನೀಡಿದರು.

ನೂತನ ಬಸ್ ಓಡಾಟದಿಂದ ಜನಸಾಮಾನ್ಯರಿಗೆ ಅನುಕೂಲವಾಗಲಿದೆ ಎಂದು ಬಿಜೆಪಿ ಗ್ರಾಮಾಂತರ ಘಟಕದ ಅಧ್ಯಕ್ಷ ಎಂ.ಪಿ. ಲಿಂಗರಾಜ್ ತಿಳಿಸಿದರು.

ಗ್ರಾಮಸ್ಥರು ಬಸ್ಗೆ ಹೂವಿನ ಅಲಂಕಾರ ಮಾಡಿದ್ದರು. ಬಸ್ ಚಾಲಕ ಮತ್ತು ಕಂಡಕ್ಟರ್ಗೆ ಮಾಲಾರ್ಪಣೆ ಮಾಡಿ, ಸಿಹಿ ಹಂಚಿ ಸಂಭ್ರಮಿಸಿದರು.

ಗ್ರಾಮಾಂತರ ಘಟಕದ ಕಾರ್ಯದರ್ಶಿ ಹುಗ್ಗಿ ಮಹಾಂತೇಶ್, ಉಕ್ಕಡಗಾತ್ರಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಚಂದ್ರಗೌಡ, ಸದಸ್ಯ ಕೆಂಚವೀರಯ್ಯ, ಕಡರನಾಯ್ಕನಹಳ್ಳಿ ಮಂಜಣ್ಣ, ಅರುಣ್, ಸಿದ್ದಯ್ಯ, ಹಾಲಸ್ವಾಮಿ ಮತ್ತು ಗ್ರಾಮಸ್ಥರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.