ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹರಿಹರ | ಡೆಂಗಿ ಶಂಕೆ: ಯುವಕ ಸಾವು

Published 9 ಜುಲೈ 2024, 20:17 IST
Last Updated 9 ಜುಲೈ 2024, 20:17 IST
ಅಕ್ಷರ ಗಾತ್ರ

ಹರಿಹರ: ತೀವ್ರ ಜ್ವರದಿಂದ ಬಳಲುತ್ತಿದ್ದ ನಗರದ ಯುವಕನೊಬ್ಬ ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಮೃತಪಟ್ಟಿದ್ದು, ಡೆಂಗಿ ಶಂಕೆ ವ್ಯಕ್ತಪಡಿಸಲಾಗಿದೆ.

ಕೇಶವ ನಗರದ ಅರುಣ್ (22) ಮೃತ ಯುವಕ. ಆಟೊ ಚಾಲಕನಾಗಿದ್ದ ಈತ 10 ದಿನಗಳ ಹಿಂದೆ ಜ್ವರದಿಂದ ಬಳಲಿದ್ದರಿಂದ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದ. ನಂತರ ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾದರೂ ಗುಣಮುಖನಾಗದ್ದರಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ. ಭಾನುವಾರ ಸಂಜೆ ಮೃತಪಟ್ಟಿದ್ದಾನೆ. ಡೆಂಗಿ ಲಕ್ಷಣಗಳಿದ್ದವು ಎಂದು ಕುಟುಂಬದ ಮೂಲಗಳು ಹೇಳಿವೆ.

ಸ್ಥಳೀಯ ಪ್ರಯೋಗಾಲಯಗಳಲ್ಲಿ ನಡೆಸಲಾದ ರಕ್ತ ಪರೀಕ್ಷೆಯಲ್ಲಿ ಡೆಂಗಿ ಖಚಿತವಾಗಿಲ್ಲ. ಯುವಕನ ರಕ್ತದ ಮಾದರಿಯನ್ನು ಪುಣೆಯ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT