ಹರಿಹರ: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟೇನರ್ ಲಾರಿಯೊಂದು ಪಲ್ಟಿಯಾಗಿ ಹಲವು ಗಂಟೆ ವಾಹನ ಸಂಚಾರಕ್ಕೆ ಅಡ್ಡಿಯಾಯಿತು.

ಬೆಂಗಳೂರು ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಲಾರಿ ಶುಕ್ರವಾರ ಮಧ್ಯಾಹ್ನ ಹೆದ್ದಾರಿಯ ಸೇತುವೆ ಮೇಲೆ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಉರುಳಿಬಿದ್ದಿದೆ. ಘಟನೆಯಲ್ಲಿ ಲಾರಿ ಚಾಲಕನಿಗೆ ಸಣ್ಣ, ಪುಟ್ಟ ಗಾಯಗಳಾಗಿದ್ದು, ರಸ್ತೆ ವಿಭಜಕಕ್ಕೆ ಅಳವಡಿಸಿದ್ದ ದಪ್ಪ ತಗಡಿನ ಪಟ್ಟಿ ಕಿತ್ತು ಬಂದಿದೆ.

ಲಾರಿ ಡಿಕ್ಕಿಯಾದ ರಭಸಕ್ಕೆ ರಸ್ತೆ ವಿಭಜಕದ 100 ಅಡಿಗಳವರೆಗಿನ ತಗಡು ಕಿತ್ತುಬಂದಿದೆ. ಪಲ್ಟಿಯಾದ ನಂತರ ಲಾರಿಯ ಡೀಸೆಲ್ ಟ್ಯಾಂಕ್ಗೂ ಹಾನಿಯಾಗಿ ಡೀಸೆಲ್ ರಸ್ತೆ ತುಂಬ ಹರಡಿತ್ತು.

ಅಗ್ನಿ ಅನಾಹುತ ತಡೆಯಲು ಸ್ಥಳಕ್ಕೆ ಆಗಮಿಸಿದ್ದ ಗ್ರಾಮಾಂತರ ಪೊಲೀಸರು ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಯಿಸಿ ಲಾರಿ ಹಾಗೂ ಅಕ್ಕಪಕ್ಕದ ಪ್ರದೇಶಕ್ಕೆ ನೀರು ಸಿಂಪರಣೆ ಮಾಡಿಸಿದರು. ಸ್ಥಳಕ್ಕೆ ಗ್ರಾಮಾಂತರ ಠಾಣೆ ಸಿಬ್ಬಂದಿ ಶೇಖರಪ್ಪ, ನಾಗರಾಜ್ ಆಗಮಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-43-1080515804

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.