ದಾವಣಗೆರೆ: ಸ್ಲೀಪರ್ ಕೋಚ್ ಖಾಸಗಿ ಬಸ್ಗಳಲ್ಲಿ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸುವ ಅಗತ್ಯವಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸಲಹೆ ನೀಡಿದರು.
.ಚಿತ್ರದುರ್ಗ ಬಸ್ ಅಪಘಾತ: ಐವರ ಮೃತದೇಹ ಪತ್ತೆ, 6 ಮಂದಿ ನಾಪತ್ತೆ, 21ಜನರಿಗೆ ಗಾಯ.
‘ರಾತ್ರಿ ಸಂದರ್ಭದ ಪ್ರಯಾಣ ಅಸುರಕ್ಷಿತ ಎಂಬ ಭಾವನೆ ಮೂಡಿದೆ. ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದು, ನಿರೀಕ್ಷೆ ಮೀರಿದ ಸಾವು–ನೋವು ಉಂಟಾಗುತ್ತಿದೆ. ಸ್ಲೀಪರ್ ಕೋಚ್ ಬಸ್ಗಳಲ್ಲಿ ಅವಘಡ ಸಂಭವಿಸಿದಾಗ ತುರ್ತಾಗಿ ಪಾರಾಗುವ ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕಿದೆ. ಬಸ್ ಮಾಲೀಕರೊಂದಿಗೆ ಚರ್ಚಿಸಿ ಮಾರ್ಗಸೂಚಿ ರೂಪಿಸಬೇಕು’ ಎಂದು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಚಿತ್ರದುರ್ಗದ ಹಿರಿಯೂರು ತಾಲ್ಲೂಕಿನಲ್ಲಿ ಸಂಭವಿಸಿದ ಬಸ್ ದುರಂತ ಅತ್ಯಂತ ದುಃಖದ ಸಂಗತಿ. ಸಾವಿನಲ್ಲಿರುವ ಕುಟುಂಬಗಳ ನೋವು ಅರ್ಥವಾಗಿದೆ. ನೋವಿನಿಂದ ಹೊರಬರುವ ಶಕ್ತಿಯನ್ನು ಸಂತ್ರಸ್ತ ಕುಟುಂಬಗಳಿಗೆ ದೇವರು ಕರುಣಿಸಲಿ’ ಎಂದರು.
.ಚಿತ್ರದುರ್ಗ ಬಸ್ ಅಪಘಾತ: ಆಶ್ಚರ್ಯಕರ ರೀತಿಯಲ್ಲಿ ಪಾರಾದ ಶಾಲಾ ಮಕ್ಕಳು