ದಾವಣಗೆರೆ: ನಗರದಲ್ಲಿ ಭಾನುವಾರ ಉತ್ತಮ ಮಳೆ ಸುರಿಯಿತು. ಬೆಳಿಗ್ಗೆಯಿಂದಲೇ ಮೋಡಕವಿದ ವಾತಾವರಣ ಇತ್ತು. ಆಗಾಗ ತುಂತುತು ಮಳೆ ಸುರಿಯುತ್ತಿತ್ತು.
ಮಧ್ಯಾಹ್ನ 1 ಗಂಟೆ ಸುಮಾರಿಗೆ ರಭಸವಾಗಿ ಸುರಿಯಲಾರಂಭಿಸಿತು. ಅರ್ಧಗಂಟೆಗೂ ಹೆಚ್ಚು ಕಾಲ ವರುಣ ಕೃಪೆ ತೋರಿದ.
ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಪೂರ್ಣ ಪ್ರಮಾಣದಲ್ಲಿ ಬೀಜ ಬಿತ್ತನೆ ಕಾರ್ಯವಾಗಿಲ್ಲ. ರೈತರು ಹದವಾದ ಮಳೆಗಾಗಿ ಕಾಯುತ್ತಿದ್ದರು.
ಭಾನುವಾರ ಸುರಿದ ವರ್ಷಧಾರೆಯಿಂದ ರೈತರ ಮೊಗದಲ್ಲಿ ಸಂತಸ ಮೂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.