ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಗುರುವಾರ ರಜೆ

Last Updated 7 ಆಗಸ್ಟ್ 2019, 13:37 IST
ಅಕ್ಷರ ಗಾತ್ರ

ಮಂಗಳೂರು: ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

ಅಂಗನವಾಡಿಗಳಿಂದ ಪದವಿ ಕಾಲೇಜುಗಳವರೆಗೆ (ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಅನ್ವಯ) ಎಲ್ಲ ಶಿಕ್ಷಣ ಸಂಸ್ಥೆಗಳಿಗೂ ರಜೆ ಘೋಷಿಸಲಾಗಿದೆ. ಮುಂದಿನ ಮೂರು ದಿನಗಳವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚಿಸಲಾಗುದೆ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಇರಬೇಕು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ಮಳೆಯ ಕಾರಣ ಮಂಗಳವಾರ ಮತ್ತು ಬುಧವಾರವೂ ಜಿಲ್ಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT