ಬುಧವಾರ, ಸೆಪ್ಟೆಂಬರ್ 22, 2021
23 °C

ದಾವಣಗೆರೆ ಜಿಲ್ಲೆಯಲ್ಲಿ ಭಾರಿ ಮಳೆ: ₹ 8.5 ಲಕ್ಷ ನಷ್ಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದೆ.ಇದರಿಂದಾಗಿ ₹ 8.5 ಲಕ್ಷ ಅಂದಾಜು ನಷ್ಟವಾಗಿದೆ.

ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 1 ಕಚ್ಚಾ ಮನೆ ಪೂರ್ಣ ಹಾನಿಯಾಗಿದೆ. ₹ 67 ಸಾವಿರ ಲಕ್ಷ ನಷ್ಟವಾಗಿದೆ. 2 ಎಕರೆ ಮೆಕ್ಕೆಜೋಳ ಹಾಗೂ 3 ಎಕರೆ ಈರುಳ್ಳಿ ಬೆಳೆ ಹಾನಿಯಾಗಿದೆ. ₹ 70 ಲಕ್ಷ ಅಂದಾಜು ನಷ್ಟ ಸಂಭವಿಸಿದೆ. ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 1 ಪಕ್ಕಾಮನೆ, ಒಂದು ಕಚ್ಚಾಮನೆ ಭಾಗಶಃ ಹಾನಿಯಾಗಿದೆ. ತಲಾ ₹ 50 ಸಾವಿರ ನಷ್ಟವಾಗಿದೆ. ನ್ಯಾಮತಿ ತಾಲ್ಲೂಕಿನಲ್ಲಿ 4 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು, ₹ 1.5 ಲಕ್ಷ ಅಂದಾಜು ನಷ್ಟವಾಗಿದೆ. ಚನ್ನಗಿರಿ ತಾಲ್ಲೂಕಿನಲ್ಲಿ 9 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು, ₹ 3.70 ಲಕ್ಷ ನಷ್ಟ ಎಂದು ಅಂದಾಜಿಸಲಾಗಿದೆ.

ಬುಧವಾರ 16.98 ಮಿ.ಮೀ ಸರಾಸರಿ ಮಳೆಯಾಗಿದೆ. ಚನ್ನಗಿರಿ ತಾಲ್ಲೂಕಿನಲ್ಲಿ 12.36 ಮಿ.ಮೀಟರ್ ಮಳೆಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ 12.68 ಮಿ.ಮೀ., ಹರಿಹರ ತಾಲ್ಲೂಕಿನಲ್ಲಿ 6 ಮಿ.ಮೀ., ಹೊನ್ನಾಳಿ ತಾಲ್ಲೂಕಿನಲ್ಲಿ 9.4 ಮಿ.ಮೀ.,  ಜಗಳೂರು ತಾಲ್ಲೂಕಿನಲ್ಲಿ 44.5 ಮಿ.ಮೀ. ಮಳೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು