ಶನಿವಾರ, ಡಿಸೆಂಬರ್ 4, 2021
20 °C

ದಾವಣಗೆರೆಯಲ್ಲಿ ಗುಡುಗು ಸಹಿತ ಭಾರಿ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ನಗರ ಸೇರಿ ಜಿಲ್ಲೆಯ ವಿವಿಧೆಡೆ ಮಂಗಳವಾರ ರಾತ್ರಿ ಮಿಂಚು, ಗುಡುಗು ಸಹಿತ ಜೋರು ಮಳೆ ಸುರಿಯಿತು. ಮಧ್ಯಾಹ್ನದಿಂದ ಬಿಸಿಲ ಝಳ ಹೆಚ್ಚಿತ್ತು. ರಾತ್ರಿ 10ಗಂಟೆಗೆ ಆರಂಭವಾಗಿ ಎರಡು ಗಂಟೆಗೂ ಹೆಚ್ಚು ಕಾಲ ಸುರಿಯಿತು.  

ಜಿಲ್ಲೆಯ ಜಗಳೂರು, ಹರಿಹರ, ಮಲೇಬೆನ್ನೂರು, ಸಂತೇಬೆನ್ನೂರು, ನ್ಯಾಮತಿ ತಾಲ್ಲೂಕಿನ ರಾಮೇಶ್ವರಗಳಲ್ಲಿ ಮಳೆಯಾಗಿದೆ. ಹರಪನಹಳ್ಳಿ ಕಸಬಾ ಹೋಬಳಿ ಜೋರು ಮಳೆ ಸುರಿದಿದೆ. ಅನೇಕ ಕಡೆ ಹಳ್ಳಕೊಳ್ಳಗಳಿಗೆ ನೀರು ತುಂಬಿದ್ದು, ಕೆಲವೆಡೆ ಮನೆ ಹಾಗೂ ಬೆಳೆಗಳಿಗೆ ಹಾನಿ ಮಾಡಿದೆ.

ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ರೈಲ್ವೆ ಬ್ರಿಡ್ಜ್ ಅಂಡರ್‌ಪಾಸ್, ಅಶೋಕ ರಸ್ತೆ ಮುಂತಾದ ಕಡೆ ನೀರು ತುಂಬಿಕೊಂಡು ಸಂಚಾರಕ್ಕೆ ತೊಂದರೆಯಾಯಿತು. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು