ಸೋಮವಾರ, 2 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: ಜಿಲ್ಲಾ ವಕೀಲರ ಸಂಘಕ್ಕೆ ಹೈಕೋರ್ಟ್ ಪ್ರಶಂಸೆ

Published 9 ಆಗಸ್ಟ್ 2023, 7:08 IST
Last Updated 9 ಆಗಸ್ಟ್ 2023, 7:08 IST
ಅಕ್ಷರ ಗಾತ್ರ

ದಾವಣಗೆರೆ: ಲೋಕ ಅದಾಲತ್‌ನಲ್ಲಿ ಹೆಚ್ಚಿನ ಪ್ರಕರಣಗಳನ್ನು ಯಶಸ್ವಿ ಹಾಗೂ ಶಾಂತಿಯುತವಾಗಿ ಇತ್ಯರ್ಥ ಪಡಿಸಿದ್ದಕ್ಕಾಗಿ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಕಾರ್ಯಾಕ್ಷರಾದ ಜಿ. ನರೇಂದ್ರ ಅವರು ಜಿಲ್ಲಾ ವಕೀಲರ ಸಂಘಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ವಕೀಲರ ಸಂಘದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನಸ್‌ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ಅವರು ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್.ಅರುಣ್‌ಕುಮಾರ್ ಅವರಿಗೆ ಪ್ರಶಂಸಾ ಪತ್ರವನ್ನು ಹಸ್ತಾಂತರಿಸಿ ಅವರು ಮಾತನಾಡಿದರು.

‘ರಾಜ್ಯದಲ್ಲಿ ಅತೀ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸುವಲ್ಲಿ ದಾವಣಗೆರೆ ವಕೀಲರ ಸಂಘದ ಸದಸ್ಯರು ಸಂಪೂರ್ಣ ಸಹಕಾರ ನೀಡಿದ್ದಾರೆ’ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ್ ಮ. ಕರಣ್ಣನವರ್ ತಿಳಿಸಿದರು.

‘ಭಾರತದ ನ್ಯಾಯಾಂಗ ವ್ಯವಸ್ಥೆಯು ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ಕೈಗೊಳ್ಳುವ ಎಲ್ಲಾ ಕಾರ್ಯಗಳಿಗೂ ಸಂಘದ ಸಂಪೂರ್ಣ ಸಹಕಾರವಿದೆ. ಯಶಸ್ವಿ ಹಾಗೂ ಶಾಂತಿಯುತ ಲೋಕ್ ಅದಾಲತ್‌ಗೆ ದಾವಣಗೆರೆಯ ಎಲ್ಲಾ ನ್ಯಾಯಾಧೀಶರು ‌ಸಹಕಾರ ನೀಡುತ್ತಾರೆ’ ಎಂದು ಸಂಘದ ಅಧ್ಯಕ್ಷ ಎಲ್‌.ಎಚ್.ಅರುಣ್‌ಕುಮಾರ್ ತಿಳಿಸಿದರು.

ನ್ಯಾಯಾಧೀಶರಾದ ವಿಜಯಾನಂದ, ದಶರಥ್, ಶ್ರೀಪಾದ್, ಪ್ರವೀಣ್‌ಕುಮಾರ್, ಶಿವಪ್ಪ ಸಲಗೆರೆ, ನಿವೇದಿತಾ, ರೇಷ್ಮಾ, ಅಫ್ತಾಬ್, ಸಮೀರ್ ಕೊಳ್ಳಿ, ಪ್ರಶಾಂತ್, ಮಲ್ಲಿಕಾರ್ಜುನ್, ಸಿದ್ಧರಾಜು, ನಾಜಿಯಾ ಕೌಸರ್, ಸಂಘದ ಕಾರ್ಯದರ್ಶಿ ಎಸ್. ಬಸವರಾಜ್, ಉಪಾಧ್ಯಕ್ಷ ಜಿ.ಕೆ. ಬಸವರಾಜ್ ಗೋಪನಾಳ್, ಸಹ ಕಾರ್ಯದರ್ಶಿ ಎ.ಎಸ್. ಮಂಜುನಾಥ್ , ಕಾರ್ಯಕಾರಿ ಸಮಿತಿ ಸದಸ್ಯರಾದ ವಾಗೀಶ್ ಕಟಗಿಹಳ್ಳಿ ಮಠ, ಮಧುಸೂದನ್, ಅಜಯ್‌ಕುಮಾರ್, ಭಾಗ್ಯಲಕ್ಷ್ಮೀ, ಚೌಡಪ್ಪ, ನಾಗರಾಜ್ ಎಲ್. ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT