ಶನಿವಾರ, ಸೆಪ್ಟೆಂಬರ್ 25, 2021
29 °C

ಬಸವಾಪಟ್ಟಣದಲ್ಲಿ ಹೈಟೆಕ್ ಆಸ್ಪತ್ರೆ ನಿರ್ಮಾಣ: ಸಂಸದ ಜಿ.ಎಂ. ಸಿದ್ದೇಶ್ವರ ಘೋಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಸವಾಪಟ್ಟಣ: ಹೋಬಳಿ ಕೇಂದ್ರ ಹಾಗೂ ಸುತ್ತಲಿನ ಜನರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ನೀಡುವ ಅನುದಾನದಲ್ಲಿ ಹೈಟೆಕ್‌ ಆಸ್ಪತ್ರೆ ನಿರ್ಮಿಸಲಾಗುವುದು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ತಿಳಿಸಿದರು.

ಇಲ್ಲಿನ ಜನತಾ ಪ್ರೌಢಶಾಲೆಯಲ್ಲಿ ಬಿಜೆಪಿ ಯುವ ಮೋರ್ಚಾ ಮಾಯಕೊಂಡ ಘಟಕದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.

‘ಪ್ರತಿ ಲೋಕಸಭಾ ಕ್ಷೇತ್ರಕ್ಕೆ ಒಂದು ಹೈಟೆಕ್‌ ಆಸ್ಪತ್ರೆ ನಿರ್ಮಿಸಲು ಮಂಜೂರಾತಿ ಸಿಕ್ಕಿದೆ. ನನ್ನ ಕ್ಷೇತ್ರವಾಗಿರುವ ಬಸವಾಪಟ್ಟಣಕ್ಕೆ ಈ ಆಸ್ಪತ್ರೆಯನ್ನು ನೀಡಲಾಗುವುದು. ಜಿಲ್ಲೆಯಲ್ಲಿ ಕೋವಿಡ್‌ ಇಳಿಕೆ ಕಂಡು ಬಂದಿದ್ದು, ಸಂಪೂರ್ಣವಾಗಿ ಲಾಕ್‌
ಡೌನ್‌ ಸಡಿಲಗೊಳಿಸಲು ಮುಖ್ಯಮಂತ್ರಿ ಅವರಿಗೆ ಮನವಿ ಮಾಡಲಾಗಿದೆ’ ಎಂದು ತಿಳಿಸಿದರು.

ಶಾಸಕ ಪ್ರೊ.ಎನ್‌.ಲಿಂಗಣ್ಣ, ಸಂಸದ ಜಿ.ಎಂ.ಸಿದ್ದೇಶ್ವರ ಹಾಗೂ ರಕ್ತದಾನ ಮಾಡಿದ 70 ಯುವಕರಿಗೆ ಕೃತಜ್ಞತೆ ಸಲ್ಲಿಸಿದರು. ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಡಾ.ಗೀತಾ ಮತ್ತು ಸಿಬ್ಬಂದಿ, ವೈದ್ಯಾಧಿಕಾರಿಗಳಾದ ಡಾ.ವೆಂಕಟೇಶ್‌, ಡಾ.ನಾಗರಾಜನಾಯ್ಕ, ದೇವೇಂದ್ರಪ್ಪ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಶಿವಪ್ರಕಾಶ್‌, ಪ್ರಧಾನ ಕಾರ್ಯದರ್ಶಿ ಎಲ್ಲೇಶ್‌, ಮಾಯಕೊಂಡ ಅಧ್ಯಕ್ಷ ಬಿ.ಜಿ. ಸಚಿನ್‌, ಮುಖಂಡರಾದ ಎಚ್‌.ಹೊನ್ನಪ್ಪ, ಪೂಜಾರ್‌ ಶೇಖರಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು