ಶುಕ್ರವಾರ, ಜನವರಿ 24, 2020
20 °C

ತವರಿನಲ್ಲೇ ಚಿ.ಮೂ ಅಂತ್ಯಕ್ರಿಯೆಗಾಗಿ ಹಿರೇಕೋಗಲೂರು ಗ್ರಾಮಸ್ಥರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಂತೇಬೆನ್ನೂರು: ಖ್ಯಾತ ಸಂಶೋಧಕ ಡಾ.ಎಂ. ಚಿದಾನಂದ ಮೂರ್ತಿ ಅಂತ್ಯಸಂಸ್ಕಾರ ಅವರ ಸ್ವಗ್ರಾಮ ಹಿರೇಕೋಗಲೂರಿನಲ್ಲೇ ನಡೆಯಬೇಕು ಎಂದು ಡಾ.ಚಿದಾನಂದ ಮೂರ್ತಿ ಪ್ರತಿಷ್ಠಾನದ ಸದಸ್ಯರು, ಗ್ರಾಮಸ್ಥರು ಹಾಗೂ ಶಾಲಾ ವಿದ್ಯಾರ್ಥಿಗಳು ಶನಿವಾರ ಗ್ರಾಮದಲ್ಲಿ ಪ್ರತಿಭಟಿಸಿದರು.

ಪ್ರತಿಷ್ಠಾನದ ಅಧ್ಯಕ್ಷ ಮಲ್ಲಿಕಾರ್ಜುನ್ ಮಾತನಾಡಿ, ‘ಹುಟ್ಟೂರಿನಲ್ಲಿ ಅಂತ್ಯಕ್ರಿಯೆ ನಡೆಸಿದರೆ ಪ್ರಾಮುಖ್ಯತೆ ಇರುತ್ತದೆ. ಇಲ್ಲೇ ಅಂತ್ಯಕ್ರಿಯೆ ನಡೆಸಬೇಕು ಎಂದು ನಾವೆಲ್ಲ ಒಕ್ಕೊರಲಿನ ತೀರ್ಮಾನ ತೆಗೆದುಕೊಂಡಿದ್ದೇವೆ. ನಮ್ಮ ಅಭಿಪ್ರಾಯಕ್ಕೆ ಮನ್ನಣೆ ನೀಡಬೇಕು’ ಎಂದು ಮನವಿ ಮಾಡಿದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಗದೀಶ್ ಗೌಡ, ‘ತವರೂರಿನಲ್ಲೇ ಅಂತ್ಯಕ್ರಿಯೆ ನಡೆಸಲು ಸರ್ಕಾರ ಹಾಗೂ ಕುಟುಂಬದವರು ಅವಕಾಶ ನೀಡಬೇಕು. ಸ್ಮಾರಕ ಭವನ ನಿರ್ಮಿಸಿ ಅಭಿವೃದ್ಧಿ ಪಡಿಸುವ ಶಾಶ್ವತ ಯೋಜನೆ ಹಮ್ಮಿಕೊಳ್ಳಬೇಕು’ ಎಂದು ಆಗ್ರಹಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು