ಮಲೇಬೆನ್ನೂರು: ‘ಹೋಬಳಿಯ ಹೊಳೆಸಿರಿಗೆರೆ ಗ್ರಾಮದಲ್ಲಿ ನಿರ್ಮಿಸಿರುವ ಶಿವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಕಟ್ಟಡವನ್ನು ಮೇ 23ರಂದು ಬೆಳಿಗ್ಗೆ 11ಕ್ಕೆ ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸುವರು’ ಎಂದು ಸಂಘದ ಅಧ್ಯಕ್ಷ ಬಿ.ಚಂದ್ರಶೇಖರ್ ಹೇಳಿದರು.

‘ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಶಾಸಕ ಬಿ.ಪಿ. ಹರೀಶ್, ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ, ಮಾಜಿ ಶಾಸಕರಾದ ಎಚ್.ಎಸ್. ಶಿವಶಂಕರ್, ಎಸ್.ರಾಮಪ್ಪ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಹರಿಹರ ತಾಲ್ಲೂಕು ಘಟಕದ ಅಧ್ಯಕ್ಷ ನಂದಿಗಾವಿ ಶ್ರೀನಿವಾಸ್ ಸೇರಿದಂತೆ ಷೇರುದಾರರು, ಸಹಕಾರಿ ಧುರೀಣರು ಉಪಸ್ಥಿತರಿರುವರು’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘5 ಗುಂಟೆಯಲ್ಲಿ ₹ 1 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಲಾಗಿದೆ. ಸಂಘ ಆರಂಭವಾದಾಗಿನಿಂದಲೂ ಷೇರುದಾರರು, ಗ್ರಾಹಕರ ಸಹಕಾರದಿಂದ ಲಾಭದಲ್ಲಿ ಸಾಗಿದೆ’ ಎಂದು ಉಪಾಧ್ಯಕ್ಷ ಜಿ. ಆಂಜನೇಯ ಮಾಹಿತಿ ನೀಡಿದರು.

ನಿರ್ದೇಶಕರಾದ ಎಚ್.ಜಿ. ಚಂದ್ರಶೇಖರ್, ಎಚ್.ಬಿ. ಶಿವಕುಮಾರ್, ಸರೋಜಮ್ಮ, ಕೆ.ಎಸ್. ರಂಗನಾಥ್, ಸಿದ್ದೇಶ್ ಎಸ್, ಎಚ್. ಷಣ್ಮುಖಪ್ಪ, ದೇವೇಂದ್ರಪ್ಪ, ರಮೇಶ, ಎನ್.ಎಲ್. ಪ್ರಕಾಶ್, ನಿಟ್ಟೂರು ಧನಂಜಯ, ಕಾರ್ಯದರ್ಶಿ ಹನುಮಂತಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-43-819349727

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.