ಹೊನ್ನಾಳಿ: ಇಲ್ಲಿನ ಗೃಹರಕ್ಷಕ ದಳದ ಪ್ಲಟೂನ್ ಕಮಾಂಡರ್ ಕೆ. ನಾಗರಾಜಪ್ಪ ಅವರು 2024-25ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ.

1988ರಲ್ಲಿ ಗೃಹರಕ್ಷಕ ದಳಕ್ಕೆ ಸೇರಿದ ಅವರು ಈವರೆಗೂ ಇಲ್ಲಿ ಸೇವೆ ಸಲ್ಲಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹಾಡೋನಹಳ್ಳಿಯಲ್ಲಿ ಗಣಪತಿ ವಿಸರ್ಜನೆ ದುರಂತದಲ್ಲಿ ಮೃತಪಟ್ಟ 11 ಜನರ ಮೃತದೇಹಗಳನ್ನು ಹೊರತೆಗೆಯುವಲ್ಲಿ, ತುಂಗಭದ್ರಾ ನದಿ ಪ್ರವಾಹದ ವೇಳೆ ಜನ– ಜಾನುವಾರು ರಕ್ಷಣೆ, ಕೋವಿಡ್ ಸಂದರ್ಭದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿದ ಇವರಿಗೆ ಡಿಜಿಪಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸನಾ ಪತ್ರ ನೀಡಿ ಸಿಎಂ ಪದಕಕ್ಕೆ ಶಿಫಾರಸು ಮಾಡಿದ್ದರು.

ಬೆಂಗಳೂರಿನಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಗೃಹಸಚಿವ ಜಿ. ಪರಮೇಶ್ವರ ಅವರು ಕೆ. ನಾಗರಾಜಪ್ಪ ಅವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ನೀಡಿ ಗೌರವಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.