ಹೊನ್ನಾಳಿ: ಅವಳಿ ತಾಲ್ಲೂಕಿನ ಆರು ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ವಿತರಣೆಗೆ ಕ್ರಮ ಕೈಗೊಂಡಿದ್ದು, ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ದಾಸ್ತಾನು ಸಮರ್ಪಕವಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಬಿ.ಎನ್. ವಿಶ್ವನಾಥ್ ಸಲಹೆ ನೀಡಿದರು.

ಇಲ್ಲಿನ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ ಶುಕ್ರವಾರ ಭೇಟಿ ನೀಡಿದ ವೇಳೆ ಮಾತನಾಡಿದರು.

ಮಾರಾಟಗಾರರು ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡುವುದು ಕಂಡುಬಂದಲ್ಲಿ ಅಗತ್ಯ ವಸ್ತುಗಳ ಕಾಯ್ದೆ 1955 ಹಾಗೂ ರಸಗೊಬ್ಬರ ನಿಯಂತ್ರಣ ಆದೇಶ 1985ರಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ರೈತರಿಗೆ ಕಡ್ಡಾಯವಾಗಿ ಎಫ್ಐಡಿ ಮೂಲಕ ಯೂರಿಯಾ ಗೊಬ್ಬರ ವಿತರಣೆ ಮಾಡಿ ಅಧಿಕೃತ ಬಿಲ್ ನೀಡಬೇಕು. ರೈತರು ಬಿಡಿ (ಚಿಲ್ಲರೆ) ಬಿತ್ತನೆ ಬೀಜಗಳನ್ನು ಖರೀದಿಸಬಾರದು. ಅಧಿಕೃತ ಮಾರಾಟಗಾರರಿಂದಲೇ ಬಿಲ್ ಪಡೆಯಬೇಕು ಎಂದು ಸೂಚಿಸಿದರು.

ರೈತರು ಎಫ್ಐಡಿ ಮತ್ತು ಆಧಾರ್ ಕಾರ್ಡ್ ವಿವರ ನೀಡಿ ರಸಗೊಬ್ಬರ ಪಡೆಯಬಹುದು. ಮೆಕ್ಕೆಜೋಳಕ್ಕೆ ಬದಲಾಗಿ ರಾಗಿ, ಜೋಳ, ದ್ವಿದಳ ಧಾನ್ಯ, ಎಣ್ಣೆಕಾಳು ಬೆಳೆಗಳನ್ನು ಹೆಚ್ಚಾಗಿ ಬೆಳೆಯಬೇಕು. ನೈಸರ್ಗಿಕ ಕೃಷಿಯೊಂದಿಗೆ ರಸಗೊಬ್ಬರಗಳ ಬಳಕೆ ಕಡಿಮೆ ಮಾಡಿ ಮಣ್ಣಿನ ಫಲವತ್ತತೆ ಹೆಚ್ಚಿಸಬೇಕು ಎಂದು ಸಲಹೆ ನೀಡಿದರು.

ಹೊನ್ನಾಳಿ ತಾಲ್ಲೂಕಿನಲ್ಲಿ 72.01 ಮಿ.ಮೀ. ಹಾಗೂ ನ್ಯಾಮತಿ ತಾಲ್ಲೂಕಿನಲ್ಲಿ 107.01 ಮಿ.ಮೀ ಮುಂಗಾರು ಪೂರ್ವ ಮಳೆಯಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-43-1815947997

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.