ಹೊನ್ನಾಳಿ: ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಪಾತ್ರ ಅಭಿನಂದನೀಯವಾದುದು ಎಂದು ಭಾರತೀಯ ವಿದ್ಯಾಸಂಸ್ಥೆಯ ಕಾರ್ಯದರ್ಶಿ, ವೈದ್ಯ ಎಚ್.ಪಿ. ರಾಜಕುಮಾರ್ ಹೇಳಿದರು.

ಶುಕ್ರವಾರ ಸಂಸ್ಥೆಯ ಸಭಾಂಗಣದಲ್ಲಿ ಕಾರ್ಮಿಕರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪುರಸಭೆ ಪೌರಕಾರ್ಮಿಕರನ್ನು ಸನ್ಮಾನಿಸಿ ಮಾತನಾಡಿದರು.

ರಾಜ್ಯದಲ್ಲಿ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರಿಗೆ ಸರ್ಕಾರ ಸೇವಾ ಭದ್ರತೆ ಒದಗಿಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಸರ್ಕಾರ ಬಹುತೇಕ ಪೌರಕಾರ್ಮಿಕರನ್ನು ಗುತ್ತಿಗೆ ಆಧಾರದಲ್ಲಿ ನೇಮಕಮಾಡಿಕೊಂಡಿದ್ದು, ಕನಿಷ್ಠ ವೇತನ ನೀಡುತ್ತಿದೆ. ಅವರನ್ನು ಕಾಯಂಗೊಳಿಸಿ ಸೂಕ್ತ ವೇತನ ಪಾವತಿಸಬೇಕು ಎಂದರು.

ಕಾರ್ಮಿಕರಿಗೆ ಆರೋಗ್ಯ ಮತ್ತು ಕೌಟುಂಬಿಕ ಭದ್ರತೆ ನೀಡುವ ಜವಾಬ್ದಾರಿ ಸರ್ಕಾರದ ಮೇಲಿದೆ. ಈ ಬಗ್ಗೆ ಸರ್ಕಾರ ಸಕರಾತ್ಮಕ ಚಿಂತನೆ ನಡೆಸಬೇಕು ಎಂದು ಹೇಳಿದರು.

ಸಂಸ್ಥೆಯ ಕಾರ್ಯದರ್ಶಿ ಕೆ. ಗಣೇಶ್ ಹಾಗೂ ಇತರರು ಮಾತನಾಡಿದರು. ಸಂಸ್ಥೆಯ ಉಪಾಧ್ಯಕ್ಷ ಎಚ್. ಲಿಂಗಯ್ಯ, ಪದಾಧಿಕಾರಿಗಳಾದ ಸೋಮಶೇಖರ್, ಹಾಲೇಶ್ ಕುಂಕೋದ್, ಪ್ರಕಾಶ್ ಹೆಬ್ಬಾರ್, ರೂಪಾ ಕರಿಸಿದ್ದಪ್ಪ, ಅಂಬಿಕಾ, ದೇವಿರಮ್ಮ, ಪ್ರಸನ್ನ, ಮುಖ್ಯ ಶಿಕ್ಷಕರು, ಶಿಕ್ಷಕರು ಉಪಸ್ಥಿತರಿದ್ದರು.

ಪೌರಕಾರ್ಮಿಕರ ಸಂಘದ ಅಧ್ಯಕ್ಷ ನಾಗರಾಜ ಸೇರಿದಂತೆ 27 ಪೌರಕಾರ್ಮಿಕರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-43-760278313

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.