ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಜೆಪಿ, ಜೆಡಿಎಸ್ ವಿರುದ್ಧ ನಾಳೆ ಬೃಹತ್ ಪ್ರತಿಭಟನೆ: ಶಾಸಕ ಡಿ.ಜಿ. ಶಾಂತನಗೌಡ

Published 21 ಆಗಸ್ಟ್ 2024, 16:28 IST
Last Updated 21 ಆಗಸ್ಟ್ 2024, 16:28 IST
ಅಕ್ಷರ ಗಾತ್ರ

ಹೊನ್ನಾಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡದಿದ್ದರೂ ಮುಡಾ ವಿಚಾರವಾಗಿ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಆಗಸ್ಟ್ 23ರಂದು ಬೆಳಿಗ್ಗೆ 11 ಗಂಟೆಗೆ ಹೊನ್ನಾಳಿ ಮತ್ತು ಸಾಸ್ವೇಹಳ್ಳಿ ಮತ್ತು ನ್ಯಾಮತಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನಕದಾಸ ವೃತ್ತದಿಂದ ಮೆರವಣಿಗೆ ಮೂಲಕ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ಮೆರವಣಿಗೆ ತಲುಪಲಿದೆ. ಅಲ್ಲಿ ಮಾನವ ಸರಪಳಿ ರಚಿಸಲಾಗುವುದು. ರಾಜ್ಯಪಾಲರು ಮತ್ತು ವಿರೋಧ ಪಕ್ಷಗಳ ಚಿತಾವಣೆ ಕುರಿತು ಮುಖಂಡರು ಮಾತನಾಡಲಿದ್ದಾರೆ. ನಂತರ ಅಲ್ಲಿಂದ ತಾಲ್ಲೂಕು ಕಚೇರಿಗೆ ತೆರಳಿ ಉಪವಿಭಾಗಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಪ್ರತಿಭಟನೆಗೆ ಕನ್ನಡಪರ ಸಂಘಟನೆಗಳು, ಸಹಕಾರ ಸಂಘಗಳು, ರೈತ ಸಂಘಟನೆಗಳು ಸಹಕಾರ ನೀಡಲಿವೆ ಎಂದರು. 

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಹೊನ್ನಾಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಣ್ಣಕ್ಕಿ ಬಸವನಗೌಡ, ಸಾಸ್ವೇಹಳ್ಳಿ ಘಟಕದ ಅಧ್ಯಕ್ಷ ಆರ್. ನಾಗಪ್ಪ, ತಾಲ್ಲೂಕು ಸಾಧು ವೀರಶೈವ ಸಮಾಜದ ಅಧ್ಯಕ್ಷ ಎಚ್.ಎ. ಗದ್ದಿಗೇಶ್, ತಾಲ್ಲೂಕು ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಪುಷ್ಪಾ ರವೀಶ್, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಡಿ.ಜಿ. ವಿಶ್ವನಾಥ್, ಎಚ್.ಎ. ಉಮಾಪತಿ, ಸಾಸ್ವೇಹಳ್ಳಿ ಚಂದ್ರಶೇಖರ್, ವರದರಾಜಪ್ಪ ಗೌಡ, ಕೆಂಗಲಹಳ್ಳಿ ಷಣ್ಮುಖಪ್ಪ, ಕೆಎಂಎಫ್‌ನ ನಿರ್ದೇಶಕ ಹನುಮನಹಳ್ಳಿ ಬಸವರಾಜಪ್ಪ ಅವರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT