ಹೊನ್ನಾಳಿ: ‘ಪಟ್ಟಣದ ಅಭಿವೃದ್ಧಿಗೆ 2025-26ನೇ ಸಾಲಿನ ಮುಖ್ಯಮಂತ್ರಿ ಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ₹5 ಕೋಟಿ ಅನುದಾನ ಬಿಡುಗಡೆಯಾಗಿದ್ದು ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಗಿದೆ’ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.

ಪಟ್ಟಣದ ಸಂತೆ ಮೈದಾನದಲ್ಲಿ ಸಿ.ಸಿ. ರಸ್ತೆ, ಸಿ.ಸಿ. ಚರಂಡಿ ನಿರ್ಮಾಣಕ್ಕೆ ₹1.40 ಕೋಟಿ ಮೊತ್ತದ ಕಾಮಗಾರಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

‘20ನೇ ವಾರ್ಡ್ನಲ್ಲಿ ಸರ್ಕಾರಿ ಬಸ್ ಡಿಪೊ ರಸ್ತೆ ಮತ್ತು ದೇವನಾಯಕನಹಳ್ಳಿಯ ವಸತಿಗೃಹಗಳ ಹತ್ತಿರದ ರಸ್ತೆ ಮತ್ತು ಚರಂಡಿ ಸಿಡಿ ನಿರ್ಮಾಣ ಕಾಮಗಾರಿಗೆ ₹ 1 ಕೋಟಿ ಬಿಡುಗಡೆಯಾಗಿದೆ. ದುರ್ಗಿಗುಡಿ ದಕ್ಷಿಣ ಭಾಗದ ಹೊಸ ಅಂಬೇಡ್ಕರ್ ಭವನ ಮುಂಭಾಗದ ಆಯ್ದ ಭಾಗಗಳಲ್ಲಿ ಚರಂಡಿ ಮತ್ತು ಸಿಡಿ ನಿರ್ಮಾಣ, ಭವನದ ಅಭಿವೃದ್ಧಿಗೆ ₹ 1 ಕೋಟಿ ಅನುದಾನ ನೀಡಲಾಗಿದೆ’ ಎಂದರು.

‘ದೇವನಾಯಕನಹಳ್ಳಿಯ ಕನಕದಾಸ ವೃತ್ತದಿಂದ ಮುಸ್ಲಿಂ ಸಮುದಾಯದ ಸ್ಮಶಾನದವರೆಗೆ ಸಿ.ಸಿ. ರಸ್ತೆ ಹಾಗೂ ಇಂಟರ್ಲಾಕ್ ಪೇವರ್ಸ್ ಅಳವಡಿಸುವ ಕಾಮಗಾರಿಗೆ ₹50 ಲಕ್ಷ ಅನುದಾನ ಮಂಜೂರಾಗಿದೆ. ಸದ್ಯವೇ ಕಾಮಗಾರಿ ಆರಂಭಿಸಲಾಗುವುದು’ ಎಂದು ತಿಳಿಸಿದರು.

ಬಯಲು ಸೀಮೆ ಪ್ರದೇಶಾಭಿವೃದ್ಧಿ ನಿಗಮದ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಉಪವಿಭಾಗಾಧಿಕಾರಿ ಎಚ್.ಬಿ. ಚನ್ನಪ್ಪ, ಎಂಜಿನಿಯರ್ ದೇವರಾಜ್, ಪುರಸಭೆ ಮಾಜಿ ಅಧ್ಯಕ್ಷ ಎ.ಕೆ. ಮೈಲಪ್ಪ, ಸದಸ್ಯರಾದ ಮೊಟ್ಟೆ ಬೂದೆಪ್ಪ, ದೊಡ್ಡಕೇರಿ ಮಾದಪ್ಪ, ಮಾಜಿ ಸದಸ್ಯರಾದ ಎಚ್.ಡಿ. ವಿಜೇಂದ್ರಪ್ಪ, ರಾಜೇಂದ್ರ, ಮುಖಂಡ ಎಚ್.ಎ. ಉಮಾಪತಿ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-43-264440531

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.