ಹೊನ್ನಾಳಿ: ತಾಲ್ಲೂಕಿನ ಅರಕೆರೆ, ಎ.ಕೆ. ಕಾಲೊನಿ ಹಾಗೂ ಕುಳಗಟ್ಟೆ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಈ ಭಾಗಗಳಲ್ಲಿ ರೈತರಿಂದ ಕೊಳವೆಬಾವಿಯನ್ನು ಬಾಡಿಗೆಗೆ ಪಡೆದು ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.

ಮಂಗಳವಾರ ತಾಲ್ಲೂಕು ಪಂಚಾಯಿತಿ ಸಾಮಾರ್ಥ್ಯ ಸೌಧದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕುಡಿಯುವ ನೀರು ಪೂರೈಕೆಗೆ ಹಣದ ಸಮಸ್ಯೆ ಇಲ್ಲ. ಆದ್ದರಿಂದ ಮುಂಜಾಗ್ರತಾ ಕ್ರಮ ವಹಿಸಬೇಕು. ತಾಲ್ಲೂಕಿನ ಎಸ್. ಮಲ್ಲಾಪುರ, ಮಾದೇನಹಳ್ಳಿ, ಸುಂಕದಕಟ್ಟೆ, ಬಲಮುರಿ ಮತ್ತು ಅರಬಗಟ್ಟೆಯಲ್ಲೂ ನೀರಿನ ಲಭ್ಯತೆಯ ಪ್ರಮಾಣ ಕಡಿಮೆಯಾಗುತ್ತಿದೆ. ಆದರೆ, ನೀರಿಗೆ ಹಾಹಾಕಾರವಿಲ್ಲ, ಈ ಭಾಗಗಳಲ್ಲೂ ನೀರಿನ ಸಮಸ್ಯೆ ಹೋಗಲಾಡಿಸಲು ಪಿಡಿಒಗಳು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಎಲ್ಲಾ ಗ್ರಾಮಗಳ ಪಿಡಿಒ ಜೊತೆ ಸಂಪರ್ಕದಲ್ಲಿದ್ದು, ನೀರು ಪೂರೈಸಲು ಕ್ರಮ ವಹಿಸಲಾಗಿದೆ ಎಂದು ಎಇಇ ಸೋಮ್ಲಾನಾಯ್ಕ ತಿಳಿಸಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೆಲವು ವೈದ್ಯರು ಸಮಯಕ್ಕೆ ಸರಿಯಾಗಿ ಬರುವುದಿಲ್ಲ, ಚಿಕಿತ್ಸೆ ನೀಡುವುದಿಲ್ಲ ಎಂದು ಕೆಲವರು ದೂರುತ್ತಿದ್ದಾರೆ ಎಂದು ಸಚಿವರು ಪ್ರಶ್ನಿಸಿದಾಗ, ‘ವೈದ್ಯರು ಬೆಳಿಗ್ಗೆ ಸ್ವಲ್ಪ ತಡವಾಗಿ ಬರುತ್ತಿದ್ದು ಉಳಿದಂತೆ ಯಾವುದೇ ಸಮಸ್ಯೆ ಇಲ್ಲ’ ಎಂದು ಡಾ. ಹನುಮಂತಪ್ಪ ಪ್ರತಿಕ್ರಿಯಿಸಿದರು.

‘ನಾನು ಕೆಲವು ವೈದ್ಯರಿಗೆ ಫೋನ್ ಮಾಡಿದರೆ ಕರೆ ತೆಗೆದುಕೊಳ್ಳುವುದಿಲ್ಲ. ಮುಂದೆ ಇಂತಹ ವರ್ತನೆ ಮುಂದುವರಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬಯಲುಸೀಮೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಚ್.ಬಿ. ಮಂಜಪ್ಪ ಎಚ್ಚರಿಕೆ ನೀಡಿದರು.

ತಾಲ್ಲೂಕಿನಲ್ಲಿ ಪೂರ್ವ ಮುಂಗಾರು ವಾಡಿಕೆಯಂತೆ 34 ಮಿ.ಮೀಟರ್ ಇದ್ದು, 39 ಮಿಲಿ ಮೀಟರ್ ಮಳೆಯಾಗಿದೆ. ನ್ಯಾಮತಿ ತಾಲ್ಲೂಕಿನಲ್ಲಿ 38 ಮಿಲಿ ಮೀಟರ್ ವಾಡಿಕೆ ಇದ್ದು, 68 ಮಿ,ಮೀ ಮಳೆಯಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ವಿಶ್ವನಾಥ್ ಮಾಹಿತಿ ನೀಡಿದರು.

ಮುಂಗಾರು ಹಂಗಾಮಿಗೆ ಯೂರಿಯಾ, ಕಾಂಪೋಸ್ಟ್, ಡಿಎಪಿ ಸೇರಿದಂತೆ ಇತರೆ ರಸಗೊಬ್ಬರಗಳನ್ನು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಬೆಸ್ಕಾಂ, ನೀರಾವರಿ, ಮೀನುಗಾರಿಕೆ, ಗ್ರಾಮೀಣಾಭಿವೃದ್ಧಿ, ಸಮಾಜ ಕಲ್ಯಾಣ ಇಲಾಖೆ, ಬಿಸಿಎಂ, ಪೊಲೀಸ್, ಅಕ್ಷರ ದಾಸೋಹ ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ವರದಿ ಮಂಡಿಸಿದರು.

ಜಂಟಿ ಕೃಷಿ ನಿರ್ದೇಶಕ ಜಿಯಾವುಲ್ಲಾ, ಹೊನ್ನಾಳಿ ಉಪವಿಭಾಗಾಧಿಕಾರಿ ಎಚ್.ಬಿ. ಚನ್ನಪ್ಪ, ತಹಶೀಲ್ದಾರ್ ರಾಜೇಶ್ ಕುಮಾರ್, ಪೊಲೀಸ್ ಇನ್ಸ್ಪೆಕ್ಟರ್ ಸುನಿಲ್ಕುಮಾರ್, ತಾ.ಪಂ. ಇಒ ಅಶೋಕ್, ಬಿಇಒ ನಿಂಗಪ್ಪ, ಪಿಎಎಲ್ಡಿ ಬ್ಯಾಂಕ್ ಅಧ್ಯಕ್ಷ ರಾಘವೇಂದ್ರ, ಟಿಎಪಿಸಿಎಂಎಸ್ ಅಧ್ಯಕ್ಷ ಮರಳುಸಿದ್ದಪ್ಪ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-43-778481046

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.