ಹೊನ್ನಾಳಿ: ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ 2026-27ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಮೇ 10ರಂದು ಆಯೋಜಿಸಲಾಗಿದೆ.

ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಸೇರಿ ಇತರೆ ವಿಭಾಗಗಳಲ್ಲಿ ಸಾಧನೆ ಮಾಡಿದ ಮಾಜಿ ಸೈನಿಕರ ಪ್ರತಿಭಾನ್ವಿತ ಮಕ್ಕಳನ್ನು ಸನ್ಮಾನಿಸಲಾಗುವುದು. ಶಾಸಕರು, ಮಾಜಿ ಸಚಿವರು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ.

ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ಜಮಾ ಖರ್ಚುಗಳನ್ನು ಸಭೆಯಲ್ಲಿ ಮಂಡಿಸಲಾಗುವುದು. ಮಾಜಿ ಸೈನಿಕರ ಕುಟುಂಬದ ಎಲ್ಲಾ ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಮನವಿ ಮಾಡಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-43-1611278893

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.