ಹೊನ್ನಾಳಿ: ‘ರಾಜ್ಯದಲ್ಲಿ ರಸಗೊಬ್ಬರದ ಕೃತಕ ಅಭಾವ ಸೃಷ್ಟಿ ಮಾಡಲಾಗಿದೆ. ಕಾಳಸಂತೆಯಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿದೆ. ಹೀಗಾಗಿ ರೈತರು ಪರದಾಡುವಂತಾಗಿದೆ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ದೂರಿದರು.

‘ಒಂದು ಚೀಲ ಯೂರಿಯಾ ಗೊಬ್ಬರಕ್ಕೆ ₹ 266 ದರವಿದ್ದು, ಹೊನ್ನಾಳಿ ಸೇರಿದಂತೆ ಹಲವೆಡೆ ಅದನ್ನು ಕಾಳಸಂತೆಯಲ್ಲಿ ₹ 380ಕ್ಕೆ ಮಾರಾಟ ಮಾಡುತ್ತಿರುವುದಾಗಿ ರೈತರು ಮಾಹಿತಿ ಕೊಡುತ್ತಿದ್ದಾರೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಒಂದು ಚೀಲ ಡಿಎಪಿ ರಸಗೊಬ್ಬರಕ್ಕೆ ₹ 1,350 ಇದ್ದರೆ ಅದನ್ನು ₹ 1,600ಕ್ಕೆ ಮಾರಾಟ ಮಾಡಲಾಗುತ್ತಿದೆ. ಇದಕ್ಕೆಲ್ಲಾ ಕೃತಕ ಅಭಾವ ಸೃಷ್ಟಿ ಹಾಗೂ ರಾಜ್ಯ ಸರ್ಕಾರದ ಕುಮ್ಮಕ್ಕು ಕಾರಣ’ ಎಂದು ಆರೋಪಿಸಿದರು.

‘ಅಧಿಕಾರಿಗಳು, ವ್ಯಾಪಾರಿಗಳು ರೈತರಿಗೆ ಅಗತ್ಯವಿರುವ ರಸಗೊಬ್ಬರ ಕೊಡುವ ಬದಲು ಅದಕ್ಕೆ ಲಿಂಕ್ ಎಂದು ಹೇಳಿ ಇತರೆ ಗೊಬ್ಬರ ಕೊಡುತ್ತಿದ್ದಾರೆ. ಇದು ರೈತರನ್ನು ಕೆರಳಿಸುತ್ತಿದೆ’ ಎಂದು ಹೇಳಿದರು.

‘ಮೆಕ್ಕೆಜೋಳ ಬೆಳೆದ ರೈತರು ಸೂಕ್ತ ಬೆಲೆ ಸಿಗದೇ ಕಣ್ಣೀರು ಹಾಕುತ್ತಿದ್ದಾರೆ. ಇದೀಗ ಭತ್ತದ ಬೆಳೆ ಕಟಾವು ಆಗುತ್ತಿದ್ದು, ರಾಜ್ಯ ಸರ್ಕಾರ ತಕ್ಷಣವೇ ಭತ್ತ ಖರೀದಿ ಕೇಂದ್ರ ಆರಂಭಿಸಬೇಕು’ ಎಂದು ಒತ್ತಾಯಿಸಿದರು.

‘ರಾಜ್ಯದ ಜನರಿಗೆ ಕೊಡಬೇಕಾದ ಅಂಗವಿಕಲ ವೇತನ, ವಿಧವಾ ವೇತನ ಸೇರಿದಂತೆ ಇತರೆ ಮಾಸಾಶನ ನಾಲ್ಕು ತಿಂಗಳಿಂದ ಬಾಕಿ ಇದ್ದು ಸರ್ಕಾರ ದಿವಾಳಿ ಅಂಚಿಗೆ ತಲುಪಿದೆ. ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್, ಶೂ–ಸಾಕ್ಸ್ ಕೊಡುವುದಕ್ಕೆ ಹಣವಿಲ್ಲ’ ಎಂದು ಟೀಕಿಸಿದರು.

‘ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲುವ ಭೀತಿ ಎದುರಾಗಿದೆ. ಹೀಗಾಗಿ ಸಭೆ ನಡೆಸಿ ವಿರೋಧ ವ್ಯಕ್ತಪಡಿಸಿದ್ದಾರೆ’ ಎಂದು ದೂರಿದರು.

‘ಯುದ್ಧದ ಕಾರಣದಿಂದಾಗಿ ದೇಶದಲ್ಲಿ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಹೆಚ್ಚಾಗಿದ್ದು, ರಾಜ್ಯ ಸರ್ಕಾರ ವಿಧಿಸುತ್ತಿರುವ ಸುಂಕವನ್ನು ಕಡಿಮೆ ಮಾಡಬೇಕು’ ಎಂದು ಒತ್ತಾಯಿಸಿದರು.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಅರಕೆರೆ ನಾಗರಾಜ್, ಮಾಜಿ ಅಧ್ಯಕ್ಷ ಜೆ.ಕೆ.ಸುರೇಶ್, ನೆಲವಣ್ಣಿ ಮಂಜುನಾಥ್ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-43-1380499588

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.