ಹೊನ್ನಾಳಿ: ‘ಮೀನುಗಾರರ ಕುಟುಂಬದ ಆರ್ಥಿಕ ಮಟ್ಟ ಸುಧಾರಿಸಲು ರಾಜ್ಯ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ’ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.

ಮೀನುಗಾರಿಕೆ ಇಲಾಖೆ ವತಿಯಿಂದ ಈಚೆಗೆ 15 ಫಲಾನುಭವಿಗಳಿಗೆ ಮಿನು ಹಿಡಿಯುವ ಸಲಕರಣೆಗಳ ಕಿಟ್ ವಿತರಿಸಿ ಮಾತನಾಡಿದರು.

‘ಜಿಲ್ಲಾ ಪಂಚಾಯಿತಿ ಮತ್ತು ರಾಜ್ಯ ವಲಯ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಮೀನುಗಾರಿಕೆಯ ಸಲಕರಣೆಗಳುಳ್ಳ ಕಿಟ್ ವಿತರಿಸಲಾಗಿದೆ. ಈ ಹಿಂದೆ ಮೀನುಗಾರಿಕೆ ಕಿಟ್ ಪಡೆಯಲು ನೀಡುತ್ತಿದ್ದ ₹10,000 ಸಹಾಯಧನವನ್ನು 2026-27ನೇ ಸಾಲಿನಿಂದ ₹20,000ಕ್ಕೆ ಹೆಚ್ಚಿಸಲಾಗಿದೆ’ ಎಂದು ಅವರು ತಿಳಿಸಿದರು.

‘ವಿಶೇಷ ಯೋಜನೆಯಡಿ ಈಗಾಗಲೇ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ 35 ಅರ್ಹ ಫಲಾನುಭವಿಗಳಿಗೆ ದೋಣಿ, ಹರಿಗೋಲು ಸೇರಿ ವಿವಿಧ ಪರಿಕರಗಳನ್ನು ವಿತರಿಸಲಾಗಿದೆ’ ಎಂದರು.

‘ಮತ್ಸ್ಯ ಆಶ್ರಯ ಯೋಜನೆಯಡಿ 2024-25ನೇ ಸಾಲಿನಲ್ಲಿ ಎರಡು ಹಂತಗಳಲ್ಲಿ ಒಟ್ಟು 35 ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಾಗಿದೆ’ ಎಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಡಿ. ಅಣ್ಣಪ್ಪಸ್ವಾಮಿ ಹೇಳಿದರು.

ಸಹಾಯಕ ನಿರ್ದೇಶಕರಾದ ಸುಮಾ, ಸಿಬ್ಬಂದಿ ಸುಮಾ, ಬಸವರಾಜ್, ಕೌಶಿಕ್ ಗಿರೀಶ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-43-870210442

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.