ಹೊನ್ನಾಳಿ: ‘ಲಿಂ. ಒಡೆಯರ್ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಜಯಂತಿ ಹಾಗೂ 52ನೇ ವರ್ಷದ ಪಟ್ಟಾಧಿಕಾರ ಕಾರ್ಯಕ್ರಮದ ಅಂಗವಾಗಿ ಹೈಟೆಕ್ ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆಯ ಕಟ್ಟಡ ನಿರ್ಮಾಣಕ್ಕೆ ಜುಲೈ 1ರಂದು ಶಂಕುಸ್ಥಾಪನೆ ನೆರವೇರಿಸಲಾಗುವುದು’ ಎಂದು ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಹಿರೇಕಲ್ಮಠದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳ ಜಂಗಮರು ಹಾಗೂ ಅರ್ಚಕರ ಸಂಘ ಮತ್ತು ಪುರೋಹಿತರ ಕ್ಷೇಮಾಭಿವೃದ್ಧಿ ಸಂಘಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

‘ಅಂದು ಮಠದಲ್ಲಿ ಕಲ್ಯಾಣೋತ್ಸವ ಕಾರ್ಯಕ್ರಮ ನಡೆಯಲಿದ್ದು, ಸಂಘದ ಎಲ್ಲ ಸದಸ್ಯರು ಸಹಕಾರ ನೀಡಬೇಕು’ ಎಂದರು.

ಜಂಗಮ ಸಂಘದ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಯ್ಯ, ಅರ್ಚಕರ ಸಂಘದ ಶಿವಮೊಗ್ಗ ಜಿಲ್ಲಾ ಘಟಕದ ನಿರ್ದೇಶಕ ಶಿವಲಿಂಗಯ್ಯ, ಕಾರ್ಯದರ್ಶಿ ರುದ್ರಯ್ಯ, ಬಿ.ಎಂ.ಲೋಕೇಶ್ವರಯ್ಯ, ಪುರೋಹಿತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವಿರೂಪಾಕ್ಷಯ್ಯ ಶಾಸ್ತ್ರಿ, ಹೊನ್ನಾಳಿಯ ಅನ್ನದಾನಯ್ಯ ಶಾಸ್ತ್ರಿ, ಹೊಳೆಮಠ ಶಾಸ್ತ್ರಿ, ಚನ್ನೇಶ್ ಶಾಸ್ತ್ರಿ, ಕಿರಣ್ ಶಾಸ್ತ್ರಿ, ಶಿವಮೊಗ್ಗದ ಬೂದಿಸ್ವಾಮಿ, ರುದ್ರಯ್ಯ, ಬಸವಾಪಟ್ಟಣದ ಗುರು ದಾರುಕಾಚಾರ್ಯ ಶಾಸ್ತ್ರಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-43-2140720907

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.