ಹೊನ್ನಾಳಿ: ‘ಪುರಸಭೆ ವ್ಯಾಪ್ತಿಯ ಎಲ್ಲ ರೀತಿಯ ಆಸ್ತಿಗಳ ಮೇಲೆ ಶೇ 3ರಷ್ಟು ತೆರಿಗೆ ದರ ಏರಿಕೆ ಮಾಡಲಾಗಿದೆ. ಏಪ್ರಿಲ್ ತಿಗಳೊಳಗೆ ತೆರಿಗೆ ಪಾವತಿಸಿದರೆ ಶೇ 5ರಷ್ಟು ರಿಯಾಯಿತಿ ಪಡೆಯಬಹುದು’ ಎಂದು ಪುರಸಭೆ ಮುಖ್ಯಾಧಿಕಾರಿ ಟಿ. ಲೀಲಾವತಿ ತಿಳಿಸಿದ್ದಾರೆ.

‘ಆಸ್ತಿ ತೆರಿಗೆ ದರ ನಿವೇಶನಕ್ಕೆ ಭೂಮಿ, ವಸತಿ ಕಟ್ಟಡ, ವಾಣಿಜ್ಯ ಕಟ್ಟಡ ಹಾಗೂ ಕೈಗಾರಿಕೆ ಕಟ್ಟಡಕ್ಕೆ ಶೇ 3ರಷ್ಟು ತೆರಿಗೆ ದರ ನಿಗದಿಪಡಿಸಲು ತೀರ್ಮಾನಿಸಲಾಗಿದೆ. 2022–24ರ ನಂತರ 3 ವರ್ಷಗಳಿಗೊಮ್ಮೆ ನೀರಿನ ತೆರಿಗೆ ದರವನ್ನು ಶೇ 5ರಷ್ಟು ಹೆಚ್ಚಿಸಲು ಫೆ. 2ರಂದು ಪುರಸಭೆಯ ಆಡಳಿತಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ’ ಎಂದು ಮುಖ್ಯಾಧಿಕಾರಿ ಟಿ. ಲೀಲಾವತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಆದ್ದರಿಂದ 2026ರ ಏಪ್ರಿಲ್ ತಿಂಗಳಲ್ಲಿ ಕಂದಾಯ ಪಾವತಿಸಿದಲ್ಲಿ ಶೇ 5ರ ರಿಯಾಯಿತಿ ಸೌಲಭ್ಯವನ್ನು ಪಡೆದುಕೊಳ್ಳಬಹುದು’ ಎಂದು ತಿಳಿಸಿದ್ದಾರೆ.

‘ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರ ಸುತ್ತೋಲೆಯಂತೆ ಪ್ರತಿ ಹಣಕಾಸು ವರ್ಷದ ಆರಂಭದ ಸಾಲಿನ ಮಾರುಕಟ್ಟೆ ಮಾರ್ಗಸೂಚಿ ಬೆಲೆಗಳನ್ನು ಆಧರಿಸಿ ಆಸ್ತಿ ತೆರಿಗೆ ಪರಿಷ್ಕರಣೆ ಮಾಡಲಾಗಿದ್ದು, ಇದಕ್ಕೆ ಪುರಸಭೆಯ ಆಸ್ತಿ ಮಾಲೀಕರು ಸಹಕಾರ ನೀಡಬೇಕು’ ಎಂದು ಮನವಿ ಮಾಡಿದ್ದಾರೆ.

ತೆರಿಗೆ ಪಾವತಿದಾರರಿಗೆ ರಿಯಾಯಿತಿ ಘೋಷಣೆ

ನ್ಯಾಮತಿ: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಯಂ ತೆರಿಗೆ ಪಾವತಿಯನ್ನು ಉತ್ತೇಜಿಸಲು 2026–27ನೇ ಸಾಲಿನ ಏಪ್ರಿಲ್ ತಿಂಗಳಲ್ಲಿ ತೆರಿಗೆ ಪಾವತಿಸುವವರಿಗೆ ಶೇ 5ರಷ್ಟು ರಿಯಾಯಿತಿ ಸೌಲಭ್ಯ ಒದಗಿಸಲಾಗಿದೆ.

ಮೇ ಹಾಗೂ ಜೂನ್ ತಿಂಗಳುಗಳಲ್ಲಿ ಪಾವತಿಸಿದಲ್ಲಿ ಯಾವುದೇ ದಂಡ ಇರುವುದಿಲ್ಲ. ಜುಲೈ ನಂತರ ಪಾವತಿಸಿದಲ್ಲಿ ಪ್ರತಿ ತಿಂಗಳಿಗೆ ಶೇ 2ರಷ್ಟು ದಂಡ ವಿಧಿಸಲಾಗುವುದು. ಆಸ್ತಿ ಮಾಲೀಕರು ದಂಡ ಪಾವತಿಸದೆ ಪಟ್ಟಣ ಪಂಚಾಯಿತಿ ರಿಯಾಯಿತಿ ಸೌಲಭ್ಯಗಳನ್ನು ಪಡೆದುಕೊಂಡು ತೆರಿಗೆ ಪಾವತಿಸಬೇಕು ಎಂದು ಪಟ್ಟಣ ಪಂಚಾಯಿತಿ ಆಡಳಿತಾಧಿಕಾರಿ ಮತ್ತು ತಹಶೀಲ್ದಾರ್ ಎಂ.ಪಿ.ಕವಿರಾಜ ಮತ್ತು ಮುಖ್ಯಾಧಿಕಾರಿ ಪಿ.ಗಣೇಶರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-43-1216385252

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.