ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊನ್ನಾಳಿ: ಆನ್‌ಲೈನ್‌ ತರಬೇತಿ

Last Updated 20 ಜುಲೈ 2020, 13:50 IST
ಅಕ್ಷರ ಗಾತ್ರ

ಹೊನ್ನಾಳಿ: ಪಟ್ಟಣದ ಕನಕ ರಂಗಮಂದಿರದಲ್ಲಿ ಪಟ್ಟಣ ಪಂಚಾಯಿತಿ, ಆರೋಗ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ಸಹಯೋಗದಲ್ಲಿ ರಾಜ್ಯ ಪೌರಾಡಳಿತ ನಿರ್ದೇಶನಾಲಯದ ಆದೇಶದಂತೆ ಕೋವಿಡ್-19 ನಿಯಂತ್ರಣಕ್ಕೆ ವಾರ್ಡ್ ಮಟ್ಟದ ಕಾರ್ಯಾಚರಣೆ ಪಡೆ ಮತ್ತು ಬೂತ್‍ಮಟ್ಟದ ಸಮಿತಿಗಳಿಗೆ ಸೋಮವಾರ ಆನ್‍ಲೈನ್ ಮೂಲಕ ತರಬೇತಿ ನೀಡಲಾಯಿತು.

ಈ ತರಬೇತಿಯಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಆರೋಗ್ಯ ಇಲಾಖೆ ಸಹಾಯಕರು, ಬೂತ್‍ಮಟ್ಟದ ಸಮಿತಿ ಸದಸ್ಯರು, ಪಟ್ಟಣ ಪಂಚಾಯಿತಿ ಜನಪ್ರತಿನಿಧಿಗಳಿಗೆ ತಜ್ಞರು ಮಾಹಿತಿ ನೀಡಿದರು.

‘ಕಂಟೈನ್ಮೆಂಟ್ ಝೋನ್‍ಗಳಲ್ಲಿ 60 ವರ್ಷ ಮೇಲಿನ ವ್ಯಕ್ತಿಗಳು, ಗರ್ಭಿಣಿಯರು, ಪಾರ್ಶ್ವವಾಯು, ಕ್ಯಾನ್ಸರ್‌, ಕ್ಷಯ, ಡಯಾಲಿಸಿಸ್, ಮಧುಮೇಹ, ಅಧಿಕ ರಕ್ತದೊತ್ತಡ, ಅಂಗಾಗ ಕಸಿ ಮಾಡಿಸಿಕೊಂಡ ವ್ಯಕ್ತಿಗಳ ಸರ್ವೆ ಮಾಡಿ ಕೂಡಲೇ ಅವರ ಗಂಟಲು ದ್ರವ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಬೇಕು. ಸಾರ್ವಜನಿಕರು ಅದಕ್ಕೆ ಹಿಂದೇಟು ಹಾಕಿದಲ್ಲಿ ಅವರ ಮನವೊಲಿಸಿಯಾದರೂ ತಪಾಸಣೆಗೆ ಕರೆದೊಯ್ಯಬೇಕು’ ಎಂದು ಸಲಹೆ ನೀಡಿದರು.

ಪಟ್ಟಣ ಪಂಚಾಯಿತಿ ಸದಸ್ಯರು, ತಹಶೀಲ್ದಾರ್ ತುಷಾರ ಬಿ. ಹೊಸೂರ, ಮುಖ್ಯಾಧಿಕಾರಿ ಎಸ್.ಆರ್. ವೀರಭದ್ರಯ್ಯ, ಆರೋಗ್ಯ ನಿರೀಕ್ಷಕ ನಾಗೇಶ್, ಎಂಜಿನಿಯರ್ ದೇವರಾಜ್, ಆರೋಗ್ಯ ಇಲಾಖೆಯ ಶಿಕ್ಷಣಾಧಿಕಾರಿ ಜಗದೀಶ್ ಕೋಡಿಹಳ್ಳಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಬಿಎಲ್‍ಒಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT