ಹೊನ್ನಾಳಿ: ಸ್ವಾತಂತ್ರ್ಯ ಹೋರಾಟಗಾರನ್ನು ಸ್ಮರಿಸುವ ಮೂಲಕ ಭವಿಷ್ಯದ ಬಗ್ಗೆ ಚಿಂತನೆ ನಡೆಸಬೇಕಾಗಿದೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಅಭಿಪ್ರಾಯಪಟ್ಟರು.

ಶುಕ್ರವಾರ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

ದೇಶವು ವಿಜ್ಞಾನ, ತಂತ್ರಜ್ಞಾನ, ಕೈಗಾರಿಕಾ ಕ್ಷೇತ್ರದಲ್ಲಿ ಬಹುದೊಡ್ಡ ಸಾಧನೆ ಮಾಡಿದೆ. ಮುಂದುವರೆದ ರಾಷ್ಟ್ರಗಳಲ್ಲಿ 4ನೇ ದೈತ್ಯಶಕ್ತಿಯಾಗಿ ಬೆಳೆದಿದೆ. ಇದಕ್ಕೆ ಈ ಹಿಂದೆ ಆಡಳಿತ ನಡೆದ ನೆಹರೂ, ಇಂದಿರಾಗಾಂಧಿ ಪ್ರಮುಖ ಕಾರಣ. ರಾಜ್ಯವು ದೇಶದಲ್ಲಿಯೇ ಅತಿ ಹೆಚ್ಚು ತಲಾ ಆದಾಯ ಹೊಂದಿದ್ದು, ನಮ್ಮ ಪಂಚ ಗ್ಯಾರಂಟಿ ಯೋಜನೆಗಳು ಇದಕ್ಕೆ ಕಾರಣ’ ಎಂದು ಪ್ರತಿಪಾದಿಸಿದರು.

ಅವಳಿ ತಾಲ್ಲೂಕಿನ ವಿವಿಧ ಇಲಾಖೆಗಳ ಅಡಿಯಲ್ಲಿ ಈಗಾಗಲೇ ₹378 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲಾಗಿದೆ ಎಂದರು.

ಉಪವಿಭಾಗಾಧಿಕಾರಿ ವಿ.ಅಭಿಷೇಕ್ ಮಾತನಾಡಿದರು. ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದವರು, ನಿವೃತ್ತ ಸೈನಿಕರು ಹಾಗೂ ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು. 40ಕ್ಕೂ ಹೆಚ್ಚು ಪೌರಕಾರ್ಮಿಕರು ಸಮವಸ್ತ್ರದೊಂದಿಗೆ ಪಥಸಂಚಲನದಲ್ಲಿ ಭಾಗವಹಿಸಿದ್ದು ವಿಶೇಷ.

ತಹಶೀಲ್ದಾರ್ ರಾಜಶೇಖರ್, ಸಿಪಿಐ ಎಚ್. ಸುನೀಲ್ಕುಮಾರ್, ಮುಖ್ಯಾಧಿಕಾರಿ ಟಿ. ಲೀಲಾವತಿ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಅರುಣ್, ಪಶುವೈದ್ಯಾಧಿಕಾರಿ ವಿಶ್ವನಟೇಶ್, ಪುರಸಭೆ ಅಧ್ಯಕ್ಷ ಎ.ಕೆ. ಮೈಲಪ್ಪ, ಸದಸ್ಯ ಧರ್ಮಪ್ಪ, ಮಾಜಿ ಸೈನಿಕ ಎಂ. ವಾಸಪ್ಪ ಉಪಸ್ಥಿತರಿದ್ದರು. ಬಿಇಒ ಕೆ.ಟಿ. ನಿಂಗಪ್ಪ ಕಾರ್ಯಕ್ರಮ ನಡೆಸಿಕೊಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.