ಹೊನ್ನಾಳಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ನಾಡಿಗೆ ಅಪಾರವಾದ ಕೊಡುಗೆ ನೀಡಿದ್ದಾರೆ. ಅವರು ಕೊಟ್ಟ ಗ್ಯಾರಂಟಿ ಯೋಜನೆಗಳು ಅಮೆರಿಕದಲ್ಲೂ ಸದ್ದು ಮಾಡುತ್ತಿವೆ’ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.

ಪಟ್ಟಣದಲ್ಲಿರುವ ತಾಲ್ಲೂಕು ಕ್ರೀಡಾಂಗಣಕ್ಕೆ ಸಿದ್ದರಾಮಯ್ಯ ಹೆಸರು ನಾಮಕರಣ ಮಾಡಿದ್ದು, ಅದರ ನಾಮಫಲಕ ಅನಾವರಣ ಮಾಡಿ ಅವರು ಮಾತನಾಡಿದರು.

‘ಸಿದ್ದರಾಮಯ್ಯ ಅವರು ನೀಡಿದ ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡುತ್ತಿದ್ದ ಬಿಜೆಪಿಯವರು ಇದೀಗ ಅಧಿಕಾರದಲ್ಲಿರುವ ತಮ್ಮ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಅಳವಡಿಸಿಕೊಳ್ಳುತ್ತಿದ್ದಾರೆ. ರಾಷ್ಟ್ರಮಟ್ಟದಲ್ಲೂ ಸಿದ್ದರಾಮಯ್ಯ ಅವರ ಸಾಧನೆಗಳು ಕೇಳಿಬರುತ್ತಿವೆ. ಸಿದ್ದರಾಮಯ್ಯ ಹಿಂದುಳಿದ ನಾಯಕ ಎಂದು ಇಡೀ ದೇಶವೇ ಅವರನ್ನು ಒಪ್ಪಿಕೊಂಡಿದೆ’ ಎಂದರು.

‘ಸಿದ್ದರಾಮಯ್ಯ ಹೆಸರನ್ನು ಕ್ರೀಡಾಂಗಣಕ್ಕೆ ಇಡಬೇಕು ಎಂದು ಪುರಸಭೆ ಪಕ್ಷಾತೀತವಾಗಿ ತೀರ್ಮಾನಿಸಿದ್ದು, ಅದಕ್ಕೆ ತಮ್ಮ ಸಂಪೂರ್ಣ ಸಹಮತವಿದೆ. ಇದನ್ನು ಸಂಬಂಧಪಟ್ಟ ಇಲಾಖೆಗೆ ಕಳಿಸಿಕೊಟ್ಟಿದ್ದು, ಅದರಂತೆ ಅವರ ಹೆಸರನ್ನು ನಾಮಕರಣ ಮಾಡಲಾಗಿದೆ’ ಎಂದು ತಿಳಿಸಿದರು.

ಬಾಲರಾಜ್ ಘಾಟ್ಗೆ ತಡೆಗೋಡೆ:

‘ಪ್ರತಿವರ್ಷ ತುಂಗಭದ್ರಾ ನದಿಗೆ ಪ್ರವಾಹ ಬಂದ ಸಂದರ್ಭದಲ್ಲಿ ಪಟ್ಟಣದ ಬಾಲರಾಜ್ ಘಾಟ್ನಲ್ಲಿ ಕೆಲವು ಮನೆಗಳು ಮುಳುಗಡೆಯಾಗುತ್ತಿದ್ದು, ಈ ಭಾಗದಲ್ಲಿ ತಡೆಗೋಡೆ ನಿರ್ಮಾಣ ಮಾಡಬೇಕು ಎಂದು ₹6 ಕೋಟಿ ಅನುದಾನವನ್ನು ಮಂಜೂರು ಮಾಡಿಸಿದ್ದೇನೆ. ಜಿಲ್ಲಾಧಿಕಾರಿ ಅನುದಾನವನ್ನು ಬಿಡುಗಡೆ ಮಾಡಿದ್ದು ಟೆಂಡರ್ ಕರೆಯಲಾಗಿದೆ. ನ.10ರಂದು ಸಂಜೆ 5 ಗಂಟೆಗೆ ತಡೆಗೋಡೆ ಕಾಮಗಾರಿಗೆ ಅಡಿಗಲ್ಲು ಹಾಕಲಾಗುವುದು’ ಎಂದು ತಿಳಿಸಿದರು.

ರಾಜ್ಯ ಬಯಲು ಸೀಮೆ ಪ್ರದೇಶಾಭಿವೃದ್ಧಿ ನಿಗಮದ ಅಧ್ಯಕ್ಷ ಎಚ್.ಬಿ. ಮಂಜಪ್ಪ, ‘ಕನಕದಾಸರ ಜಯಂತಿ ದಿನದಂದೇ ಈ ಕ್ರೀಡಾಂಗಣಕ್ಕೆ ಸಿದ್ದರಾಮಯ್ಯ ಹೆಸರಿಟ್ಟು, ನಾಮಫಲಕ ಅನಾವರಣ ಮಾಡಿರುವುದು ಸುವರ್ಣಾಕ್ಷರಗಳಲ್ಲಿ ಬರೆದಿಡುವಂಥದ್ದು’ ಎಂದು ಹೇಳಿದರು.

ಪುರಸಭೆ ಅಧ್ಯಕ್ಷ ಎ.ಕೆ. ಮೈಲಪ್ಪ, ಉಪಾಧ್ಯಕ್ಷೆ ಸಾವಿತ್ರಮ್ಮ ವಿಜೇಂದ್ರಪ್ಪ, ಮಾಜಿ ಉಪಾಧ್ಯಕ್ಷರಾದ ರಂಜಿತಾ ಚನ್ನಪ್ಪ, ಸದಸ್ಯರಾದ ಧರ್ಮಪ್ಪ, ಹೊಸಕೇರಿ ಸುರೇಶ್, ಮುಖಂಡರಾದ ಎಚ್.ಬಿ. ಅಣ್ಣಪ್ಪ, ಆರ್. ನಾಗಪ್ಪ, ಎಚ್.ಎ. ನರಸಿಂಹಪ್ಪ, ಮಾದಪ್ಪ, ಪರಸಣ್ಣಾರ ನರಸಿಂಹಪ್ಪ, ಗಾಳೇಶಪ್ಪ, ಸತೀಶ್, ಚಂದ್ರು, ವಡ್ಡಿ ಚನ್ನಪ್ಪ, ಕ್ರೀಡಾಧಿಕಾರಿ ಕಾಳಿಂಗಪ್ಪ, ಎಂಜಿನಿಯರ್ ದೇವರಾಜ್, ಡಾ. ವಿಶ್ವನಟೇಶ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.