ಹೊನ್ನಾಳಿ: ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಏಪ್ರಿಲ್ 19 ರಂದು ಚುನಾವಣೆ ನಡೆಯಲಿದೆ. ಒಟ್ಟು 10 ಸ್ಥಾನಗಳ ಬದಲು 9 ಸ್ಥಾನಗಳಿಗೆ ಮಾತ್ರ ಚುನಾವಣಾಧಿಕಾರಿ ಚುನಾವಣೆ ನಡೆಸುತ್ತಿದ್ದಾರೆ ಎಂದು ಅಭ್ಯರ್ಥಿ ಶಿವರಾಜ್ ಪಾಟೀಲ್ ದೂರಿದ್ದಾರೆ.

ಸಾಮಾನ್ಯ ಕ್ಷೇತ್ರಕ್ಕೆ 7, ಮಹಿಳಾ ಮೀಸಲು ಕ್ಷೇತ್ರದ 3 ಸ್ಥಾನಗಳಿಗೆ ಚುನಾವಣೆ ನಡೆಸಬೇಕಿತ್ತು, ಈ ಕುರಿತು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಗಿದ ನಂತರ ತಾಲ್ಲೂಕು ಘಟಕದ ಮುಖ್ಯ ಚುನಾವಣಾಧಿಕಾರಿ ಏಕಾಏಕಿಯಾಗಿ ಸಾಮಾನ್ಯ ಕ್ಷೇತ್ರಕ್ಕೆ ಮೀಸಲಿರಿಸಿದ್ದ 7 ಸ್ಥಾನಗಳ ಪೈಕಿ ಒಂದು ಸ್ಥಾನವನ್ನು ಕಡಿತಗೊಳಿಸಿದ್ದಾರೆ’ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

‘ಚುನಾವಣೆ ಪ್ರಕ್ರಿಯೆ ಆರಂಭಗೊಂಡ ನಂತರ ಹೀಗೆ ಸ್ಥಾನಗಳನ್ನು ಕಡಿತ ಮಾಡಲು ಚುನಾವಣಾಧಿಕಾರಿಗೆ ಅಧಿಕಾರ ಇಲ್ಲ’ ಎಂದು ಹೇಳಿದರು.

‘ಈ ಬಗ್ಗೆ ಪ್ರಶ್ನಿಸಿದರೆ ಚುನಾವಣಾಧಿಕಾರಿ ಸಮರ್ಪಕವಾಗಿ ಉತ್ತರ ನೀಡಲಿಲ್ಲ, ಲಿಖಿತ ಮನವಿ ಸಲ್ಲಿಸಿದರೂ ಸ್ವೀಕರಿಸಲಿಲ್ಲ’ ಎಂದು ದೂರಿದರು.

‘ಚುನಾವಣಾಧಿಕಾರಿ ಕೆ. ಮಹಾಂತೇಶ್ ಅವರು ತಮಗೆ ಆರೋಗ್ಯ ಸರಿ ಇಲ್ಲ. ಚುನಾವಣಾ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕು ಎಂದು ಕೋರಿ ಶಿಕ್ಷಕರ ಸಂಘದ ಕಾರ್ಯದರ್ಶಿಗೆ ಲಿಖಿತ ಮನವಿ ಸಲಿಸಿರುವುದು ಅನುಮಾನ ಮೂಡಿಸಿದೆ’ ಎಂದರು. ಪ್ರಮುಖರಾದ ಎ.ಕೆ. ನಾಗೇಶಪ್ಪ, ಎ.ಜಿ. ಚಂದ್ರಪ್ಪ, ಎ.ಕೆ. ರಾಮಪ್ಪ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-43-1561290557

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.