ಗುರುವಾರ , ಜನವರಿ 21, 2021
30 °C

ಶಿವಮೊಗ್ಗದಲ್ಲಿ ಮುಸ್ಲಿಂ ಗೂಂಡಾಗಿರಿ: ಸಚಿವ ಈಶ್ವರಪ್ಪ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ‘ಶಿವಮೊಗ್ಗದಲ್ಲಿ ಬಜರಂಗದಳದ ಮುಖಂಡ ನಾಗೇಶ್‌ ಮೇಲೆ ಹಲ್ಲೆ ನಡೆಸಿರುವುದರ ಹಿಂದೆ ಮುಸ್ಲಿಂ ಗೂಂಡಾಗಿರಿಯ ಕೈವಾಡವಿದೆ. ಗೂಂಡಾಗಿರಿ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ಸೂಚಿಸಲಾಗಿದೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶಿವಮೊಗ್ಗದ ನಾಗೇಶ್‌ ಮೇಲಿನ ಹಲ್ಲೆ ಪ್ರಕರಣ ಹಾಗೂ ದಾವಣಗೆರೆಯ ಧೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್‌ಗೆ ಬಂದ ಬೆದರಿಕೆ ಪತ್ರ ವೈಯಕ್ತಿಕ ವಿಚಾರವಲ್ಲ. ಈ ಬಗ್ಗೆ ಪೊಲೀಸ್‌ ಅಧಿಕಾರಿಳೊಂದಿಗೆ ಚರ್ಚಿಸಲಾಗಿದ್ದು, ಗೂಂಡಾಗಿರಿ ನಡೆಸುತ್ತಿರುವವರ ಮೇಲೆ ಎರಡು–ಮೂರು ದಿನಗಳಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ’ ಎಂದು ಹೇಳಿದರು. 

‘ಶಿವಮೊಗ್ಗದಲ್ಲಿ ಮುಸ್ಲಿಂ ಗೂಂಡಾಗಿರಿ ಮತ್ತೆ ಪ್ರಾರಂಭವಾಗಿದೆ. ಮುಸುಕು ಹಾಕಿಕೊಂಡು ಗೂಂಡಾಗಿರಿ ಮಾಡಿದ್ದಾರೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧಿಸಬೇಕು ಎಂದು ಬಜರಂಗದಳದ ಯುವಕರು ಈಚೆಗೆ ನನಗೆ ಮನವಿ ನೀಡಿದ್ದರು. ಇದನ್ನೇ ಗುರಿಯಾಗಿಸಿಕೊಂಡು ಬಜರಂಗದಳದ ಮುಖಂಡನ ಮೇಲೆ ಹಲ್ಲೆ ನಡೆಸಲಾಗಿದೆ’ ಎಂದು ತಿಳಿಸಿದರು.

‘ಬಿಜೆಪಿಯವರು ಯಾವುದೇ ಬೆದರಿಕೆ ಕರೆಗಳಿಗೆ ಬಗ್ಗುವವರಲ್ಲ; ಬದಲಾಗಿ ಬೆದರಿಕೆ ಹಾಕುವವರನ್ನೇ ನಾವು ಬಗ್ಗಿಸುತ್ತೇವೆ’ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು