ಹೊಸದುರ್ಗ: ಅಂತರ್ಜಲ ಹೆಚ್ಚಳಕ್ಕಾಗಿ ಕೆರೆ ಹೂಳೆತ್ತುವ ಕಾಯಕ ಮಾಡುತ್ತಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ ಶ್ಲಾಘನೀಯ ಎಂದು ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಭೋರೇಶ್ ಮೆಚ್ಚುಗೆ ವ್ಯಕ್ತಪಡಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಹಾಲುರಾಮೇಶ್ವರ ಯೋಜನಾ ಕಚೇರಿ ವತಿಯಿಂದ ತಾಲ್ಲೂಕಿನ ಮಲ್ಲಪ್ಪನಹಳ್ಳಿಯ ಜಾಲಿಕಟ್ಟೆಕೆರೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪ್ರತಿ ಹಳ್ಳಿಗಳಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಈ ಯೋಜನೆಯಡಿ ಕಸಬಾ ಹೋಬಳಿಯ ಮಲ್ಲಪ್ಪನಹಳ್ಳಿ ಕೆರೆ ಹೂಳೆತ್ತುವ ಕಾಯಕ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಈ ಭಾಗದಲ್ಲಿಯೂ ಅಂತರ್ಜಲ ಹೆಚ್ಚಾಗಲಿದೆ. ಕೆರೆ ಅಭಿವೃದ್ಧಿಯಾದರೆ ಗ್ರಾಮವೇ ಅಭಿವೃದ್ಧಿ ಆದಂತಾಗುತ್ತದೆ’ ಎಂದರು.

ಮಲ್ಲಪ್ಪನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಉಮಾದೇವಿ, ಕರ್ನಾಟಕ ರಾಜ್ಯ ಜನಜಾಗೃತಿ ವೇದಿಕೆ ಸದಸ್ಯ ತುಂಬಿನಕೆರೆ ಬಸವರಾಜ್, ಗೂಳಿಹಟ್ಟಿ ಕೃಷ್ಣಮೂರ್ತಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಾಲುರಾಮೇಶ್ವರ ವಲಯದ ಯೋಜನಾಧಿಕಾರಿ ಚಂದ್ರಶೇಖರ್, ಮುಖಂಡರಾದ ಸುರೇಶ್, ನಾಗೇಶ್, ಹರೀಶ್, ಉಮೇಶ್, ಪಕೀರವ್ವ, ಲತಾ, ರಘು ಸೇರಿದಂತೆ ಧರ್ಮಸ್ಥಳ ಮಹಿಳಾ ಸಂಘದ ಸದಸ್ಯರು ಹಾಗೂ ಗ್ರಾಮಸ್ಥರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.