ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ್ಯೋತಿಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಭಸ್ಮ

Published 26 ಆಗಸ್ಟ್ 2023, 15:43 IST
Last Updated 26 ಆಗಸ್ಟ್ 2023, 15:43 IST
ಅಕ್ಷರ ಗಾತ್ರ

ಜಗಳೂರು: ತಾಲ್ಲೂಕಿನ ಜ್ಯೋತಿಪುರ ಗ್ರಾಮದಲ್ಲಿ ಶನಿವಾರ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮನೆ ಸುಟ್ಟು ಅಪಾರ ಹಾನಿಯಾಗಿದೆ.

ಜ್ಯೋತಿಪುರ ಗ್ರಾಮದ ಬಸವರಾಜ್ ಅವರ ಮನೆಯಲ್ಲಿ ಎಲ್ಲರೂ ಕೆಲಸಕ್ಕೆ ತೆರಳಿದ ವೇಳೆ ಶನಿವಾರ ಬೆಳಿಗ್ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ಸಂಭವಿಸಿದೆ. ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ.

ಸ್ಥಳಕ್ಕೆ ಶಾಸಕ ಬಿ.ದೇವೇಂದ್ರಪ್ಪ ಭೇಟಿ ನೀಡಿ, ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದರು. ಶಾಸಕರು ವೈಯಕ್ತಿಕವಾಗಿ ₹25 ಸಾವಿರ ನೆರವು ನೀಡಿದರು.

ತಹಶೀಲ್ದಾರ್ ಅರುಣ್ ಕಾರಗಿ ಭೇಟಿ ನೀಡಿ, ಎಫ್‌ಎಸ್‌ಎಲ್ ವರದಿ ನಂತರ ಸರ್ಕಾರದಿಂದ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಮುಖಂಡರಾದ ಪಲ್ಲಾಗಟ್ಟೆ ಶೇಖರಪ್ಪ, ಆಪ್ತ ಸಹಾಯಕ ಶಿವರಾಜ್, ಗೌಸ್ ಪೀರ್, ಪ್ರಕಾಶ್ ರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT