ಸೋಮವಾರ, ಸೆಪ್ಟೆಂಬರ್ 20, 2021
22 °C

ಚನ್ನಗಿರಿ: ಪತಿಯ ಕೊಲೆ, ಪತ್ನಿಯೇ ಆರೋಪಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚನ್ನಗಿರಿ: ತಾಲ್ಲೂಕಿನ ವಿ. ಬನ್ನಿಹಟ್ಟಿಯಲ್ಲಿ ಮನೆಯಲ್ಲಿ ಮಲಗಿದ್ದ ವ್ಯಕ್ತಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪತ್ನಿಯೇ ಕೊಲೆ ಆರೋಪಿಯಾಗಿದ್ದಾಳೆ.

ಕೂಲಿ ಕಾರ್ಮಿಕನಾಗಿರುವ ವಿ. ಬನ್ನಿಹಟ್ಟಿಯ ಲೋಕೇಶ್‌ (35) ಮೃತಪಟ್ಟವರು. ರಾತ್ರಿ ಮಲಗಿದವರು ಅದೇ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕುತ್ತಿಗೆಯಲ್ಲಿ ಹಗ್ಗ ಬಿಗಿದ ಗುರುತು ಕಂಡು ಬಂದಿದೆ. ಪತಿ, ಪತ್ನಿ ನಡುವೆ ಆಗಾಗ ಜಗಳವಾಗುತ್ತಿತ್ತು. ಈ ಕಾರಣದಿಂದ ಪತ್ನಿ ಕುಸುಮಾ ಬೇರೆಯವರ ಜತೆಗೆ ಸೇರಿ ಕೊಲೆ ಮಾಡಿದ್ದಾಳೆ ಎಂದು ಲೋಕೇಶ್‌ನ ಸಹೋದರ ನಾಗರಾಜ್‌ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಚನ್ನಗಿರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಟ್ಕಾ: ₹ 47.5 ಸಾವಿರ ವಶ

ದಾವಣಗೆರೆ: ಬಂಟರ ಭವನ ಬಳಿ ಮಟ್ಕಾ ಜೂಜಾಟವಾಡುತ್ತಿದ್ದ ಆರೋಪಿಗಳನ್ನು ಬಂಧಿಸಿರುವ ಡಿಸಿಆರ್‌ಬಿ ಪೊಲೀಸರು
₹ 47,500 ವಶಪಡಿಸಿಕೊಂಡಿದ್ದಾರೆ. ವಿದ್ಯಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.