ಶನಿವಾರ, ಡಿಸೆಂಬರ್ 7, 2019
21 °C
ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

ಕೋಳಿವಾಡ ಮನೆ ಮೇಲೆ ಐಟಿ ದಾಳಿಯಲ್ಲಿ ನನ್ನ ಪಾತ್ರವಿಲ್ಲ: ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ‘ರಾಣೆಬೆನ್ನೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ. ಕೋಳಿವಾಡ ಅವರ ಮನೆಯ ಮೇಲಿನ ಐಟಿ ದಾಳಿಯಲ್ಲಿ ನನ್ನ ಪಾತ್ರವಿಲ್ಲ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ದಾವಣಗೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಐಟಿ ದಾಳಿ ಕುರಿತು ಕೇಳಿದ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದರು.

‘ಲಿಂಗಾಯತರು ಬಿಜೆಪಿಗೆ ಮತ ಹಾಕದೇ ಇದ್ರೆ ಯಡಿಯೂರಪ್ಪನವರ ಕೆನ್ನೆಗೆ ಹೊಡೆದ ಹಾಗೆ’ ಎಂಬ ಸಚಿವ ಮಾಧುಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ‘ಬಳ್ಳಾರಿ ಜಿಲ್ಲಾಧಿಕಾರಿ ಸ್ವಯಂಕೃತವಾಗಿ ಪ್ರಕರಣ ದಾಖಲಿಸಿದ್ದಾರೆ. ಮಾಧುಸ್ವಾಮಿ ಬಳಿ ನಾನು ಮಾತನಾಡಿ ಸತ್ಯಾಸತ್ಯತೆ ತಿಳಿದುಕೊಳ್ಳುತ್ತೇನೆ’ ಎಂದು ಹೇಳಿದರು.

ಹನಿಟ್ರ್ಯಾಪ್ ಕುರಿತು ಕೇಳಿದ ಪ್ರಶ್ನೆಗೆ ‘ಪೊಲೀಸ್ ಅಧಿಕಾರಿಗಳು ಕಾನೂನು ಪ್ರಕಾರ ತನಿಖೆ ನಡೆಸಲಿದ್ದಾರೆ’ ಎಂದು ಹೇಳಿದರು.

‘ಸರ್ಕಾರ ಬೀಳುವುದಕ್ಕಿಂತ ಸಿದ್ದರಾಮಯ್ಯ ಅವರನ್ನು ಕೆಳಗೆ ಇಳಿಸುವುದು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸೂಕ್ತ ಎನಿಸಿರಬೇಕು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು