ಬುಧವಾರ, ಡಿಸೆಂಬರ್ 8, 2021
18 °C
ಸ್ವಚ್ಛ ಸಂಕೀರ್ಣ ಉದ್ಘಾಟನೆ

ಸ್ವಚ್ಛತೆಗೆ ಆದ್ಯತೆ ನೀಡಿದರೆ ರೋಗಮುಕ್ತ ಸಮಾಜ ನಿರ್ಮಾಣ: ಶಾಮನೂರು ಶಿವಶಂಕರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಸ್ವಚ್ಛತೆಗೆ ಆದ್ಯತೆ ನೀಡಿದರೆ ರೋಗಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಇದನ್ನು ಮನಗಂಡು ಸರ್ಕಾರಗಳು ಸ್ವಚ್ಛತೆಗೆ ಒತ್ತು ನೀಡುತ್ತಿವೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.

ತಾಲ್ಲೂಕಿನ ಶಿರಮಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ರವೀಂದ್ರನಾಥ ಬಡಾವಣೆಯಲ್ಲಿ ಸ್ವಚ್ಛ ಸಂಕೀರ್ಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತ ದೇಶ ಶೇ 90ರಷ್ಟು ಹಳ್ಳಿಗಳನ್ನು ಹೊಂದಿರುವ ದೇಶ. ಹಳ್ಳಿಗಳಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವ ಅವಶ್ಯಕತೆ ಇರುವುದರಿಂದ ಹಳ್ಳಿಗಳಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಲಾಗುತ್ತಿದೆ ಎಂದರು.

ಶಾಸಕ ಎಸ್.ಎ.ರವೀಂದ್ರನಾಥ್ ಮಾತನಾಡಿ, ‘ಈ ಹಿಂದೆ ಗ್ರಾಮೀಣ ಭಾಗದಲ್ಲಿ ಎಲ್ಲೆಂದರಲ್ಲಿ ತಿಪ್ಪೆ ಹಾಕುತ್ತಿದ್ದುದರಿಂದ  ಸಾಂಕ್ರಾಮಿಕ ರೋಗಗಳು ಹರಡುತ್ತಿದ್ದವು. ಇದಕ್ಕೆ ಪರಿಹಾರವಾಗಿ ಇಂತಹ ಸಂಕೀರ್ಣಗಳನ್ನು ನಿರ್ಮಿಸಿ ರೋಗಮುಕ್ತ ಸಮಾಜ ನಿರ್ಮಿಸಲು ಸರ್ಕಾರ ಮುಂದಾಗಿದೆ. ಗ್ರಾಮೀಣ ಭಾಗದ ಜನರು ಗ್ರಾಮ ಪಂಚಾಯಿತಿಯೊಂದಿಗೆ ಕೈಜೋಡಿಸಿದರೆ ಕಾಂಪೋಸಿಟ್ ಗೊಬ್ಬರ ತಯಾರಾಗಲಿದೆ. ಇದರಿಂದ ರೈತರ ಬೆಳೆಗಳಿಗೂ ಅನುಕೂಲವಾಗಲಿದೆ’ ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಿ.ಸಿ. ನಿಂಗಪ್ಪ, ‘ಗ್ರಾಮ ಪಂಚಾಯಿತಿಗಳಿಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಅನುದಾನ ಲಭ್ಯವಾಗುತ್ತಿದ್ದು, ಈ ಅನುದಾನಗಳನ್ನು ಬಳಸಿಕೊಂಡು ಉತ್ತಮ ಕೆಲಸಗಳನ್ನು ಶಿರಮಗೊಂಡನಹಳ್ಳಿ ಗ್ರಾಮ ಪಂಚಾಯಿತಿ ಮಾಡಲಿ’ ಎಂದು ಆಶಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿನುತಾ ಎ.ಎಂ. ಸುರೇಶ್ ಬಾಬು, ‘ಸರ್ಕಾರ ಕೋವಿಡ್ ನೆಪವೊಡ್ಡಿ ಅನುದಾನ ನೀಡದ ಕಾರಣ ಅನೇಕ ಗ್ರಾಮಾಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿವೆ. ಶಾಸಕರು ಅನುದಾನ ಒದಗಿಸಬೇಕು’ ಎಂದು ಮನವಿ ಮಾಡಿದರು.

ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಎಂ.ಮಂಜಪ್ಪ, ಎ.ಬಿ. ಹನುಮಂತಪ್ಪ ಮಾತನಾಡಿದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಲಲಿತಮ್ಮ ದೇವೆಂದ್ರಪ್ಪ, ಅಭಿವೃದ್ಧಿ ಅಧಿಕಾರಿ ಕಾತ್ಯಾಯಿನಿ, ಎಸ್.ಎಂ. ರುದ್ರೇಶ್, ಎಸ್.ಬಿ. ಚಂದ್ರಪ್ಪ, ಎಸ್.ಕೆ. ಮಾಲತೇಶ್, ವೀರೇಂದ್ರ ಪಾಟೀಲ್, ಶಶಿ, ಎ.ಕೆ. ನೀಲಪ್ಪ, ಗುಡ್ಡಪ್ಪ, ಮಲ್ಲಿಕಾರ್ಜುನ್, ಕೆ.ಎಸ್. ರೇವಣಸಿದ್ದಪ್ಪ, ಆರ್. ದಿನೇಶ್ ಅವರೂ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು