ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನನ್ನನ್ನು ಗೆಲ್ಲಿಸಿದರೆ ಕ್ಷೇತ್ರದ ಅಭಿವೃದ್ಧಿಗೆ ಬದ್ಧ

ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್
Published 17 ಏಪ್ರಿಲ್ 2024, 7:44 IST
Last Updated 17 ಏಪ್ರಿಲ್ 2024, 7:44 IST
ಅಕ್ಷರ ಗಾತ್ರ

ದಾವಣಗೆರೆ: ‘ಪ್ರಸಕ್ತ ಲೋಕಸಭಾ ಚುನಾವಣೆ ನಿರ್ಣಾಯಕವಾಗಿದ್ದು, ಮತದಾರರ ಮನವೊಲಿಸಿ ನನ್ನನ್ನು ಗೆಲ್ಲಿಸಿದರೆ ದಾವಣಗೆರೆ ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ’ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನೀರ್ಥಡಿ, ಲಕ್ಕಮುತ್ತೇನೆಹಳ್ಳಿ, ಹೆಬ್ಬಾಳ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಚುನಾವಣಾ ಪ್ರಚಾರದ ವೇಳೆ ಅವರು ಮಾತನಾಡಿದರು.

‘ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವಿದ್ದು, ನನ್ನನ್ನು ಗೆಲ್ಲಿಸಿದರೆ ಕೇಂದ್ರದಿಂದಲೂ ಅನುದಾನ ತರುತ್ತೇನೆ. ಕ್ಷೇತ್ರದಲ್ಲಿ ಶಾಶ್ವತ ಕಾಮಗಾರಿಗಳು ನಡೆಯಬೇಕು. ಕೈಗಾರಿಕೆಗಳು ಬರಬೇಕು. ಆಗ ಮಾತ್ರ ಯುವಕರಿಗೆ ಉದ್ಯೋಗ ಸಿಗಲು ಸಾಧ್ಯ. ಬೂತ್ ಮಟ್ಟದಲ್ಲಿ ಕೆಲಸ ಮಾಡಿ ಕಾಂಗ್ರೆಸ್‌ಗೆ ಮತ ಚಲಾಯಿಸುವಂತೆ ಮಾಡಬೇಕು’ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

‘ಬಿಜೆಪಿ ಸಂಸದರು 5 ಬಾರಿ ಗೆದ್ದು ಈ ಕ್ಷೇತ್ರಕ್ಕೆ ಎಷ್ಟು ಅನುದಾನ ತಂದಿದ್ದಾರೆ, 22 ಕೆರೆ ನೀರಾವರಿ ಯೋಜನೆಯಲ್ಲಿ ಸಂಸದರ ಪಾಲು ಏನು ಎಂದು ಕೇಳಬೇಕಾಗಿದೆ. ಮಲ್ಲಿಕಾರ್ಜುನ್ ಅಧಿಕಾರದಲ್ಲಿ ಇಲ್ಲದಿದ್ದರೂ ರೈತರ ಪರವಾಗಿ ಕೆಲಸ ಮಾಡಿದ್ದಾರೆ’ ಎಂದರು.

ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಹೆಬ್ಬಾಳ ವಿರಕ್ತಮಠದ ಮಹಾಂತ ರುದ್ರೇಶ್ವರ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಶಾಸಕ ಕೆ.ಎಸ್.ಬಸವಂತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹನುಮಂತಪ್ಪ, ನಾಗರಾಜ್, ಮುಖಂಡರಾದ ಅಣಜಿ ಚಂದ್ರಶೇಖರ್, ಗುರುಸ್ವಾಮಿ, ಕೊಟ್ರೇಶ್ ನಾಯ್ಕ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT