ಬುಧವಾರ, ಸೆಪ್ಟೆಂಬರ್ 22, 2021
22 °C

ವಯಸ್ಸು ಇದ್ದಿದ್ರೆ ಸಿಎಂ ಆಗುತ್ತಿದ್ದೆ: ಶಾಮನೂರು ಶಿವಶಂಕರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ‘ನನಗೆ ವಯಸ್ಸು ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿದ್ದೆ. ಏನು ಮಾಡುವುದು ವಯಸ್ಸು ಇಲ್ಲ’ ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.

ದಾವಣಗೆರೆಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಅಲ್ಲ. ಕಾಂಗ್ರೆಸ್ ಸರ್ಕಾರ ಬಂದರೆ ಮುಖ್ಯಮಂತ್ರಿಯೇ ಆಗುತ್ತಿದೆ. ಏನು ಮಾಡುವುದು ವಯಸ್ಸು ಇಲ್ಲ. ಇದೇ ಕಾರಣಕ್ಕೆ ಸುಮ್ಮನೆ ಇದ್ದೇನೆ. ಈಗ ಇರುವ ಅಖಿಲ ಭಾರತ ವೀರಶೈವ ಮಹಾಸಭೆ ಅಧ್ಯಕ್ಷ ಸ್ಥಾನವೇ ಸಾಕು’ ಎಂದರು.

‘ಇನ್ನು ಮೂರು ದಿನ ಕಾದು ನೋಡಿ. ಏನು ಸಮಾಚಾರ ಎಂಬುದಕ್ಕೆ ಉತ್ತರ ಸಿಗುತ್ತದೆ. ಎಲ್ಲಾ ನೀವೇ ಹೇಳಬೇಡಿ. ಬಿಜೆಪಿ ಹೈಕಮಾಂಡ್ ಹೇಳುತ್ತದೆ’ ಎಂದು ಸುದ್ದಿಗಾರರಿಗೆ ಉತ್ತರಿಸಿದರು.

‘ನಾವೂ ವೀರಶೈವ ಮಹಾಸಭೆಯಿಂದ ಬಿ.ಎಸ್.ಯಡಿಯೂರಪ್ಪ ಅವರಿಗೆ ಬೆಂಬಲ ಸೂಚಿಸಿದ್ದೇವೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು