ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಚನ ಸಾರ ಅರಿತರೆ ಜೀವನ ಸಾರ್ಥಕ: ಗುರುಬಸವ ಸ್ವಾಮೀಜಿ

Last Updated 4 ಜುಲೈ 2022, 7:02 IST
ಅಕ್ಷರ ಗಾತ್ರ

ಚನ್ನಗಿರಿ: ‘ವಚನ ಹಾಗೂ ಶರಣ ಸಾಹಿತ್ಯವನ್ನು ತಮ್ಮ ಜೀವನದ ಅಂಗವನ್ನಾಗಿ ಮಾಡಿಕೊಂಡವರು ಫ.ಗು. ಹಳಕಟ್ಟಿ. ಅವರು ತಮ್ಮ ಆಸ್ತಿಯನ್ನು ಮಾರಾಟ ಮಾಡಿ ಅದರಿಂದ ಬಂದ ಹಣದಿಂದ ನಾಡಿನಾದ್ಯಂತ ಸಂಚರಿಸಿ ವಚನಗಳನ್ನು ಸಂಗ್ರಹಿಸಿ, ಪುಸ್ತಕ ರೂಪದಲ್ಲಿ ಹೊರತಂದರು ಎಂದು ಪಾಂಡೋಮಟ್ಟಿ ವಿರಕ್ತಮಠದ ಗುರುಬಸವ ಸ್ವಾಮೀಜಿ ಹೇಳಿದರು.

ಪಟ್ಟಣದ ಚೆನ್ನಮ್ಮಾಜಿ ಸಮುದಾಯ ಭವನದಲ್ಲಿ ಶನಿವಾರ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ ಹಾಗೂ ಬಸವ ಬಳಗದ ಸಹಯೋಗದಲ್ಲಿ ನಡೆದ ವಚನ ಮತ್ತು ಫ.ಗು. ಹಳಕಟ್ಟಿ ಅವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಹಳಕಟ್ಟಿಯವರು 22,000ಕ್ಕೂ ಹೆಚ್ಚು ವಚನಗಳನ್ನು ಸಂಗ್ರಹಿಸಿದ್ದಾರೆ. ಅವರಿಗೆ ರಾಜ್ಯ ಸರ್ಕಾರ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸಬೇಕು’ ಎಂದು ಒತ್ತಾಯಿಸಿದರು.

ತುಮ್ಕೋಸ್ ಅಧ್ಯಕ್ಷ ಆರ್.ಎಂ. ರವಿ, ಮಾಜಿ ಅಧ್ಯಕ್ಷ ಎಚ್.ಎಸ್. ಶಿವಕುಮಾರ್, ಶರಣ ಸಾಹಿತ್ಯ ಪರಿಷತ್ ಗೌರವ ಸಲಹೆಗಾರ ಎನ್.ಎಸ್. ರಾಜಪ್ಪ, ಟಿ.ವಿ. ಶಿವಲಿಂಗಪ್ಪ, ಹಿರಿಯ ಪ್ರತಕರ್ತ ಬಾ.ರಾ. ಮಹೇಶ್, ಬಸವ ಬಳಗದ ಜಿ.ಬಿ. ಸೋಮಶೇಖರಪ್ಪ, ಶರತ್, ಸರೋಜಾ ನಾಗರಾಜ್, ಸತೀಶ್, ಮಲ್ಲಿಗೆರೆ ಬಸವರಾಜಪ್ಪ ಇದ್ದರು.

ದತ್ತಿ ದಾನಿ ಎಚ್.ಎಸ್. ಮಲ್ಲಿಕಾರ್ಜುನಪ್ಪ ಅವರ ಪತ್ನಿ ಪ್ರೇಮ ಅವರನ್ನು ಸನ್ಮಾನಿಸಲಾಯಿತು. ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಎಸ್. ಮಲ್ಲೇಶಪ್ಪ ಅಧ್ಯಕ್ಷತೆ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT