ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

53 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಲ್ಲಿಗುಣಮಟ್ಟ ಕಾಯ್ದುಕೊಳ್ಳಲು ಸಲಹೆ

Last Updated 28 ಜುಲೈ 2020, 7:37 IST
ಅಕ್ಷರ ಗಾತ್ರ

ದಾವಣಗೆರೆ: ಜಗಳೂರು ತಾಲ್ಲೂಕಿನ 53 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಯಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು ಜೆಡಿಎಸ್ ಮುಖಂಡ ಕೆ.ಬಿ. ಕಲ್ಲೇರುದ್ರೇಶಪ್ಪ ಸಲಹೆ ನೀಡಿದರು.

‘22 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಪೂರ್ಣಗೊಂಡರೂ ನೀರು ಹರಿದುಬಂದಿ‌ಲ್ಲ. ಅದರಂತೆ ಈ 53 ಕೆರೆಗಳ ಯೋಜನೆ ಆಗಬಾರದು. ಈಗ 5 ಕಿ.ಮೀ. ಕಾಮಗಾರಿ ಆರಂಭವಾಗಿದ್ದು, ಲೋಪಗಳು ಕಂಡುಬಂದಿವೆ. ಆರಂಭಿಕ ಹಂತದಲ್ಲೇ ಸರಿಪಡಿಸದಿದ್ದರೆ ಮುಂದಿನ ದಿನಗಳಲ್ಲಿ ತೊಂದರೆಯಾಗುತ್ತದೆ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಈ ಕುರಿತು ಭಾರಿ ನೀರಾವರಿ ಸಚಿವ ರಮೇಶ್‌ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದ್ದೇವೆ. ₹650 ಕೋಟಿ ಮೊತ್ತದ ದೊಡ್ಡ ಗಾತ್ರದ ಯೋಜನೆ ಇದಾಗಿದ್ದು, ಗುಣಮಟ್ಟದ ಎಚ್‌ಡಿ ಪೈಪ್‌ಗಳನ್ನು ಅಳವಡಿಸಬೇಕು. ಪೈಪ್‌ಗಳ ಸಾಮರ್ಥ್ಯವನ್ನು ಪರೀಕ್ಷಿಸಿದ ನಂತರವೇ ಅಳವಡಿಸಬೇಕು’ ಎಂದು ಸಲಹೆ ನೀಡಿದರು.

ಜಿಲ್ಲೆಯಲ್ಲಿ ರೈತರಿಗೆ ಯೂರಿಯಾ ಸಿಗುತ್ತಿಲ್ಲ. ಯಾವುದೋ ಕಾಣದ ಕೈಗಳು ಕೃತಕ ಅಭಾವ ಸೃಷ್ಟಿಸುತ್ತಿವೆ. ಯೂರಿಯಾ ಇಲ್ಲ ಎಂದು ಹೇಳಿ ಬೇರೆ ಬೇರೆ ಗೊಬ್ಬರಗಳನ್ನು ಟ್ಯಾಗ್ ಮಾಡುವ ಮೂಲಕ ರೈತರನ್ನು ವಂಚಿಸುತ್ತಿವೆ. ಈ ಕುರಿತು ತನಿಖೆ ನಡೆಸಲು ಜಿಲ್ಲಾಡಳಿತ ಉನ್ನತ ಸಮಿತಿ ರಚಿಸಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಪತ್‌ಕುಮಾರ್, ಗೋವಿಂದಪ್ಪ, ಸಿದ್ದೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT