ಸೋಮವಾರ, ಜುಲೈ 4, 2022
24 °C

ಕಸದ ತೊಟ್ಟಿಯಲ್ಲಿ ಆಯುಷ್ಮಾನ್ ಕಾರ್ಡ್, ಬೆಳೆ ಸಾಲಮನ್ನಾ ಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ತಾಲ್ಲೂಕಿನ ಎಲೆಬೇತೂರು ಗ್ರಾಮದಲ್ಲಿ ಶುಕ್ರವಾರ ಆಯುಷ್ಮಾನ್ ಭಾರತ್ ಕಾರ್ಡ್ ಮತ್ತು ರೈತರ ಬೆಳೆ ಸಾಲಮನ್ನಾ ಪತ್ರಗಳು ಕಸದ ತೊಟ್ಟಿಯಲ್ಲಿ ಪತ್ತೆಯಾಗಿವೆ.

ಇಲ್ಲಿನ ಅಂಚೆ ಕಚೇರಿಯಿಂದ 100 ಮೀಟರ್ ದೂರದ ಕಸದ ತೊಟ್ಟಿಯಲ್ಲಿ 1000 ಪತ್ರಗಳು ದೊರೆತಿದೆ. ಅಂಚೆ ಕಚೇರಿ ಮೂಲಕ ಫಲಾನುಭವಿಗಳಿಗೆ ತಲುಪಿಸಬೇಕಾಗಿದ್ದ ಪತ್ರಗಳು ಕಸದ ತೊಟ್ಟಿಯಲ್ಲಿ ಪತ್ತೆಯಾಗಿರುವುದು ಅನುಮಾನಕ್ಕೆ ಎಡೆಮಾಡಿದೆ.

ಸರ್ಕಾರದಿಂದ ಕಳೆದ ಡಿಸೆಂಬರ್, ಜನವರಿಯಲ್ಲಿ ಈ ಪತ್ರಗಳು ಬಂದಿದ್ದವು. ಅಂಚೆ ಇಲಾಖೆಯವರು ಅವುಗಳನ್ನು ಜನರಿಗೆ ವಿತರಿಸದೆ ಹಾಗೆಯೇ ಇಟ್ಟುಕೊಂಡಿದ್ದರು ಎಂದು ಸ್ಥಳೀಯರು ದೂರಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ತಹಶೀಲ್ದಾರ್ ಗಿರೀಶ್ ಭೇಟಿ ನೀಡಿ ಕಾರ್ಡ್‌ಗಳನ್ನು ವಶಕ್ಕೆ ಪಡೆದರು.

‘ಇದರಲ್ಲಿ ಅಂಚೆ ಇಲಾಖೆ ಸಿಬ್ಬಂದಿ ಬೇಜವಾಬ್ದಾರಿ ಎದ್ದು ಕಾಣುತ್ತಿದೆ. ಪೋಸ್ಟ್‌ಮ್ಯಾನ್ ಹಾಗೂ ಆತನ ಸಹಾಯಕನ ವಿರುದ್ಧ ಪ್ರಕರಣ ದಾಖಲಿಸಲು ಪಿಡಿಒ ಮತ್ತು ಕಂದಾಯ ನಿರೀಕ್ಷಕರಿಗೆ ಸೂಚನೆ ನೀಡಿದ್ದೇನೆ’ ಎಂದು ತಹಶೀಲ್ದಾರ್ ಗಿರೀಶ್ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು