ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಎಸ್‌ಐ ಆಸ್ಪತ್ರೆ ಉದ್ಘಾಟನೆ

Last Updated 14 ಮೇ 2021, 7:46 IST
ಅಕ್ಷರ ಗಾತ್ರ

ದಾವಣಗೆರೆ: ಇಎಸ್‌ಐ ಆಸ್ಪತ್ರೆಯಲ್ಲಿ ಕೋವಿಡ್‌ ವಾರ್ಡ್‌ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಉದ್ಘಾಟಿಸಿದರು.

ಸಂಸದ ಜಿ.ಎಂ. ಸಿದ್ದೇಶ್ವರ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಶಾಸಕ ಎಸ್.ಎ. ರವೀಂದ್ರನಾಥ್, ಮೇಯರ್ ಎಸ್.ಟಿ. ವೀರೇಶ್, ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರೂ ಇದ್ದರು.

ಗುಣಮುಖರಾಗುತ್ತಿರುವವರಿಗೆ ವ್ಯವಸ್ಥೆ: ಕೊರೊನಾ ಸೋಂಕು ತಡೆಗಟ್ಟಲು ನಗರದ 80 ಬೆಡ್ ವ್ಯವಸ್ಥೆಯುಳ್ಳ ಇಎಸ್‍ಐ ಆಸ್ಪತ್ರೆಯನ್ನು ಡಿಟಿಎಚ್‍ಸಿ (ಡೆಡಿಕೇಟೆಡ್ ಕೋವಿಡ್ ಹೆಲ್ತ್‌ಕೇರ್ ಸೆಂಟರ್) ಮಾಡಲಾಗಿದೆ. ಆಸ್ಪತ್ರೆಯಲ್ಲಿ ಮಿನಿಮಮ್‌ ಆಕ್ಸಿಜನ್ ಪೂರೈಕೆಯನ್ನು ಮಾಡಲಾಗುತ್ತದೆ. ಕೋವಿಡ್ ಸೋಂಕಿತರಿಗೆ ಸಂಪೂರ್ಣ ಚಿಕಿತ್ಸೆ ನೀಡಲಾಗುವುದಿಲ್ಲ.

ದಾವಣಗೆರೆ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರಿಗೆ ಮೊದಲು ಚಿಕಿತ್ಸೆ ನೀಡಿ 4-5 ದಿನಗಳಲ್ಲಿ ಗುಣಮುಖರಾಗುವವರನ್ನು ಇಎಸ್‍ಐ ಆಸ್ಪತ್ರೆಗಳಿಗೆ ಕಳುಸಲಾಗುತ್ತಿದೆ. ಈ ಕಾರಣದಿಂದ ಕೋವಿಡ್-19 ಸೋಂಕಿಗೆ ತುತ್ತಾದವರು ಇಎಸ್‍ಐ ಆಸ್ಪತ್ರೆಗೆ ನೇರವಾಗಿ ಹೋಗದೆ ಚಿಗಟೇರಿ ಜಿಲ್ಲಾಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯಬೇಕು ಎಂದು ಜಿಲ್ಲಾಡಳಿತ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT