ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿನಿಲಯಗಳ ನೂತನ ಕಟ್ಟಡ ಉದ್ಘಾಟನೆ

₹ 29 ಕೋಟಿ ವೆಚ್ಚದ ವಿದ್ಯಾರ್ಥಿನಿಲಯದಲ್ಲಿ 800 ವಿದ್ಯಾರ್ಥಿಗಳಿಗೆ ಅವಕಾಶ
Last Updated 27 ಸೆಪ್ಟೆಂಬರ್ 2022, 4:15 IST
ಅಕ್ಷರ ಗಾತ್ರ

ದಾವಣಗೆರೆ: ಸರ್ಕಾರ ಬಡ ವಿದ್ಯಾರ್ಥಿಗಳ ಅನುಕೂಲಕ್ಕೆ ದಾವಣಗೆರೆ ನಗರದಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಕ್ಕೆ ಸುಸಜ್ಜಿತವಾದ ಕಟ್ಟಡ ನಿರ್ಮಿಸಿದೆ. ವಿದ್ಯಾರ್ಥಿಗಳು ತಮ್ಮ ಮನೆಯಂತೆ ಸ್ವಚ್ಛವಾಗಿಟ್ಟುಕೊಂಡು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಬೈರತಿ ಬಸವರಾಜ ತಿಳಿಸಿದರು.

ಆರ್.ಟಿ.ಒ. ಕಚೇರಿ ಬಳಿ, ಎಸ್.ಪಿ.ಎಸ್ ನಗರದಲ್ಲಿ ನಿರ್ಮಿಸಿರುವ ಸಮಾಜ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ನಾಲ್ಕು ವಿದ್ಯಾರ್ಥಿನಿಲಯಗಳ ಕಟ್ಟಡಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

₹ 29 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಬೃಹತ್‌ ವಿದ್ಯಾರ್ಥಿನಿಲಯದಲ್ಲಿ 800 ವಿದ್ಯಾರ್ಥಿಗಳಿಗೆ ಅವಕಾಶ ಸಿಗಲಿದೆ. ಮೆಟ್ರಿಕ್‌ ನಂತರದ ನಾಲ್ಕು ನಿಲಯಗಳು ಇದರಲ್ಲಿ ಒಳಗೊಂಡಿವೆ.

ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರಾದ ಎಸ್‌.ಎ. ರವೀಂದ್ರನಾಥ್‌, ಶಾಸಕ ಎಸ್.ವಿ. ರಾಮಚಂದ್ರ, ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್ ಪಿ. ಮುದಜ್ಜಿ, ಪಾಲಿಕೆ ಸದಸ್ಯೆ ಸುಧಾ ಇಟ್ಟಿಗುಡಿ, ಧೂಡಾ ಆಯುಕ್ತ ಕುಮಾರಸ್ವಾಮಿ, ಕಂದಾಯ ಉಪವಿಭಾಗಾಧಿಕಾರಿ ದುರ್ಗಾಶ್ರೀ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಿಕರಾದ ಬೇಬಿ ಸುನೀತಾ ಕೆ., ಕಾರ್ಯಪಾಲಕ ಎಂಜಿನಿಯರ್‌ ಆರ್. ನಿತಿನ್, ಸಹಾಯಕ ಎಂಜಿನಿಯರ್‌ ವೆಂಕಟೇಶ ಗುರುಮೂರ್ತಿ, ಗುತ್ತಿಗೆದಾರರಾದ ಚೇತನ್ ಜಿ.ಎಂ., ಶ್ರೀನಿವಾಸರೆಡ್ಡಿ, ಶೌಕತ್ ಹುಸೇನ್, ಅಧಿಕಾರಿಗಳು, ಸಿಬ್ಬಂದಿ
ಇದ್ದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಕೌಸರ್‌ ರೇಷ್ಮಾ ಕಾರ್ಯಕ್ರಮ ನಡೆಸಿಕೊಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT