ದಾವಣಗೆರೆ:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದಾವಣಗೆರೆ ವಿಭಾಗದಿಂದ ಜ.18 ರಂದು
ಬೆಳಿಗ್ಗೆ 10ಕ್ಕೆ ಕೇಂದ್ರ ಬಸ್ ನಿಲ್ದಾಣದಲ್ಲಿ ನಿಲ್ದಾಣದ ಪುನರ್ ನಿರ್ಮಾಣದ ಶಂಕುಸ್ಥಾಪನೆ ಹಾಗೂ ನೂತನ ತಾತ್ಕಾಲಿಕ ಬಸ್ ನಿಲ್ದಾಣದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಉದ್ಘಾಟಿಸುವರು. ಶಾಸಕ ಎಸ್.ಎ. ರವೀಂದ್ರನಾಥ್ ಅಧ್ಯಕ್ಷತೆ ವಹಿಸುವರು. ಸಂಸದ ಜಿ.ಎಂ. ಸಿದ್ದೇಶ್ವರ ಶಂಕುಸ್ಥಾಪನೆ ನೆರೆವೇರಿಸುವರು.

ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ ಚಾಲಕರಿಗೆ ಬೆಳ್ಳಿ ಪದಕ ವಿತರಣೆ ಮಾಡುವರು. ಕ.ರಾ.ರ.ಸಾ ನಿಗಮದ ಅಧ್ಯಕ್ಷರು ಹಾಗೂ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ಚಂದ್ರಪ್ಪ ನೂತನ ಮಾರ್ಗಗಳ ಉದ್ಘಾಟನೆಯನ್ನು ನೆರೆವೇರಿಸುವರು.

ಶಾಸಕರಾದ ಎಂ.ಪಿ.ರೇಣುಕಾಚಾರ್ಯ, ಕೆ.ಮಾಡಾಳ್ ವಿರೂಪಾಕ್ಷಪ್ಪ, ಎಸ್.ವಿ. ರಾಮಚಂದ್ರ, ಪ್ರೊ.ಎನ್. ಲಿಂಗಣ್ಣ, ಶಾಮನೂರು ಶಿವಶಂಕರಪ್ಪ, ನವಲಗುಂದ ಶಾಸಕ ಶಂಕರ್ ಪಾಟೀಲ್ ಮುನೇನ
ಕೊಪ್ಪ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕೆ.ವಿ. ಶಾಂತಕುಮಾರಿ, ದಾವಣಗೆರೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಕೆಎಸ್‌ಆರ್‌ಟಿಸಿ ನಿರ್ದೇಶಕ ಶಿವಯೋಗಿ ಸಿ. ಕಳಸದ, ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕ ಡಾ.ಎಂ.ಟಿ. ರೇಜು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.