ಸೋಮವಾರ, ಜೂನ್ 27, 2022
21 °C
ವಡ್ನಾಳ್‍: ₹ 25.50 ಲಕ್ಷ ಅನುದಾನದಲ್ಲಿ ನಿರ್ಮಾಣವಾದ ಆಸ್ಪತ್ರೆ

ವಡ್ನಾಳ್‍: ಪಶು ಆಸ್ಪತ್ರೆಗಿಲ್ಲ ಉದ್ಘಾಟನೆ ಭಾಗ್ಯ

ಎಚ್.ವಿ. ನಟರಾಜ್ Updated:

ಅಕ್ಷರ ಗಾತ್ರ : | |

Prajavani

ವಡ್ನಾಳ್‍ (ಚನ್ನಗಿರಿ): ತಾಲ್ಲೂಕಿನ ವಡ್ನಾಳ್ ಗ್ರಾಮದಲ್ಲಿ ಪಶು ಆಸ್ಪತ್ರೆ ಹಾಗೂ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಹೊಸ ಕಟ್ಟಡಗಳ ನಿರ್ಮಾಣಗೊಂಡಿದ್ದರೂ ಉದ್ಘಾಟನೆ ಭಾಗ್ಯ ಕಂಡಿಲ್ಲ.

ಅನುದಾನ ಬಿಡುಗಡೆಯಾಗಿ ಕಾಮಗಾರಿ ಮುಕ್ತಾಯಗೊಂಡರೂ ಉದ್ಘಾಟನೆಯಾಗದ ಕಾರಣ ಗ್ರಾಮದ ಜನರಿಗೆ ಆಸ್ಪತ್ರೆ ಸೌಲಭ್ಯ ಮರೀಚಿಕೆಯಾಗಿದೆ.

2019-20ನೇ ಸಾಲಿನಲ್ಲಿ ಪಶು ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿತ್ತು. ಪಶು ಆಸ್ಪತ್ರೆ ಕಟ್ಟಡಕ್ಕೆ ₹ 25.50 ಲಕ್ಷ ಅನುದಾನ ಬಿಡುಗಡೆಯಾಗಿ ಹೊಸ
ಕಟ್ಟಡ ನಿರ್ಮಾಣವಾಗಿದೆ. ಕಟ್ಟಡ ನಿರ್ಮಾಣವಾಗಿ ಏಳೆಂಟು ತಿಂಗಳು ಕಳೆದರೂ ಉದ್ಘಾಟನೆಯಾಗಿಲ್ಲ.

ಹೊಸ ಕಟ್ಟಡ ನಿರ್ಮಾಣವಾದರೂ ತಾತ್ಕಾಲಿಕವಾಗಿ ನೀಡಿರುವ ಕಟ್ಟಡದಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ಇದಕ್ಕೆ ಕಾರಣ ಹೊಸ ಕಟ್ಟಡಕ್ಕೆ ವಿದ್ಯುತ್ ಸಂಪರ್ಕವನ್ನು ಕಲ್ಪಿಸದೇ ಇರುವುದು. ಆಸ್ಪತ್ರೆ ಉದ್ಘಾಟನೆಯಾದರೆ ಗ್ರಾಮಸ್ಥರಿಗೆ ಅನುಕೂಲವಾಗಲಿದೆ. ಸಂಬಂಧಪಟ್ಟವರು ಈ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತಾರೆ ವಡ್ನಾಳ್ ಗ್ರಾಮದ
ಸಂತೋಷ್.

‘ಈ ಹೊಸ ಕಟ್ಟಡ ಕಾಮಗಾರಿ ಮುಕ್ತಾಯಗೊಂಡಿದೆ. ಆದರೆ ವಿದ್ಯುತ್ ಸಂಪರ್ಕ ಸಿಕ್ಕಿಲ್ಲ. ನಾಲ್ಕು ವಿದ್ಯುತ್ ಕಂಬಗಳನ್ನು ಹಾಕಿಸಬೇಕಾಗಿದೆ. ಇದಕ್ಕಾಗಿ ಬೆಸ್ಕಾಂ ಇಲಾಖೆಗೆ ನಿಗದಿತ ಶುಲ್ಕವನ್ನು ಪಾವತಿಸಿದ್ದೇವೆ. ವಿದ್ಯುತ್ ಸಂಪರ್ಕ ಇಲ್ಲದೇ ಹೊಸ ಕಟ್ಟಡದಲ್ಲಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಶೀಘ್ರ ವಿದ್ಯುತ್ ಸಂಪರ್ಕವನ್ನು ಪಡೆದು ಹೊಸ ಕಟ್ಟಡದಲ್ಲಿ ಕಾರ್ಯನಿರ್ವಹಿಸಲಾಗುವುದು’ ಎಂದು ಪಶು ವೈದ್ಯ ಇಲಾಖೆ ಸಹಾಯಕ ನಿರ್ದೇಶಕ ಡಾ. ಚಿದಾನಂದ್ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು