ಹರಪನಹಳ್ಳಿ: 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಭಾರತವು ಸಾಕ್ಷರತೆ, ಅಹಾರ ಉತ್ಪಾದನೆ, ಆರ್ಥಿಕ ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿದೆ ಎಂದು ಉಪವಿಭಾಗಾಧಿಕಾರಿ ಎಚ್.ಜಿ. ಚಂದ್ರಶೇಖರಯ್ಯ ಅನಿಸಿಕೆ ವ್ಯಕ್ತಪಡಿಸಿದರು.

ಪಟ್ಟಣದ ಕ್ರೀಡಾಂಗಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಭಾನುವಾರ ಆಯೋಜಿಸಿದ್ದ 75ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಡಿವೈಎಸ್‌ಪಿ ವಿ.ಎಸ್. ಹಾಲಮೂರ್ತಿ ರಾವ್ ಮಾತನಾಡಿ, ‘ತಾತ್ಸಾರ ಭಾವನೆಯಿಂದ ಕೋವಿಡ್ ಹರಡುತ್ತಿದೆ. ಪೊಲೀಸರು ದಂಡ ವಿಧಿಸುತ್ತಾರೆ ಎಂಬುದಕ್ಕಿಂತ ತಮ್ಮ ಪ್ರಾಣಗಳನ್ನು ತಾವು ಉಳಿಸಿಕೊಳ್ಳಲು ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸಬೇಕು’ ಎಂದರು.

ತಹಶೀಲ್ದಾರ್ ಎಲ್.ಎಂ. ನಂದೀಶ್, ಪುರಸಭೆ ಅಧ್ಯಕ್ಷ ಇಜಂತಕರ್ ಮಂಜುನಾಥ್, ಉಪಾಧ್ಯಕ್ಷೆ ನಿಟೂರು ಭೀಮವ್ವ ಸಣ್ಣಹಾಲಪ್ಪ, ಸಿಪಿಐ ನಾಗರಾಜ್ ಎಂ. ಕಮ್ಮಾರ್, ಮುಖ್ಯಾಧಿಕಾರಿ ಎರಗುಡಿ ಶಿವಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.