ಬುಧವಾರ, ಜೂಲೈ 8, 2020
27 °C

ಕ್ಯಾಂಟೀನ್‌ಗಳಲ್ಲಿ ಇಂದಿರಾಗಾಂಧಿ ಚಿತ್ರ ವಿರೂಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಇಲ್ಲಿನ ಚಿಗಟೇರಿ ಜಿಲ್ಲಾ ಆಸ್ಪತ್ರೆ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್‌ಗಳ ಹೊರಭಾಗದಲ್ಲಿದ್ದ ಇಂದಿರಾಗಾಂಧಿ ಚಿತ್ರಗಳಿಗೆ ಕಿಡಿಗೇಡಿಗಳು ವೇಸ್ಟ್ ಆಯಿಲ್ ಬಳಿದು ವಿರೂಪಗೊಳಿಸಿದ್ದಾರೆ.‌

ಶನಿವಾರ ರಾತ್ರಿ ವೇಳೆ ಕೃತ್ಯ ನಡೆದಿದ್ದು, ಈ ಕುರಿತು ಇಂದಿರಾ ಕ್ಯಾಂಟೀನ್ ಮ್ಯಾನೇಜರ್ ನವೀನ್‌ ಕುಮಾರ್‌ ಅವರು ಕೆಟಿಜೆ ನಗರ ಹಾಗೂ ಬಡಾವಣೆ ಠಾಣೆಗಳಲ್ಲಿ ಪ್ರತ್ಯೇಕ ದೂರು ದಾಖಲಿಸಿದ್ದಾರೆ.

‘ಎರಡೂ ಕಡೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದು, ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದೇನೆ’ ಎಂದು ದೂರುದಾರ ನವೀನ್‌ಕುಮಾರ್ ತಿಳಿಸಿದರು.

‘ಆರೋಪಿಗಳ ಪತ್ತೆ ಕಾರ್ಯ ಪ್ರಗತಿಯಲ್ಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದ್ದಾರೆ.

ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ.ಬಸವರಾಜ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರಕರಣ ಖಂಡಿಸಿ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು