ಶನಿವಾರ, ಜನವರಿ 28, 2023
20 °C
ಜನವರಿ ತಿಂಗಳಲ್ಲಿ ಲೋಕಾರ್ಪಣೆ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ

₹ 3.75 ಕೋಟಿ ವೆಚ್ಚದಲ್ಲಿ ಒಳಾಂಗಣ ಕ್ರೀಡಾಂಗಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚನ್ನಗಿರಿ: ‘ತಾಲ್ಲೂಕು ಅಡಿಕೆ ಬೆಳೆಗೆ ಎಷ್ಟು ಪ್ರಸಿದ್ಧಿಯಾಗಿದೆಯೋ ಅದೇ ರೀತಿ ಕ್ರೀಡೆಗಳಿಗೂ ಹೆಚ್ಚಿನ ಪ್ರಸಿದ್ಧಿ ಪಡೆದುಕೊಂಡಿದೆ. ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ದೃಷ್ಟಿಯಿಂದ ತಾಲ್ಲೂಕು ಕ್ರೀಡಾಂಗಣದಲ್ಲಿ ಸುಸಜ್ಜಿತವಾದ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ಜನವರಿ ತಿಂಗಳಲ್ಲಿ ಲೋಕಾರ್ಪಣೆ ಮಾಡಲಾಗುವುದು’ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತಿಳಿಸಿದರು.

ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ನಿರ್ಮಾಣ ಹಂತದಲ್ಲಿರುವ ಒಳಾಂಗಣ ಕ್ರೀಡಾಂಗಣ ಕಾಮಗಾರಿಯನ್ನು ಮಂಗಳವಾರ ವೀಕ್ಷಿಸಿ ಮಾತನಾಡಿದರು.

ಒಳಾಂಗಣ ಕ್ರೀಡಾಂಗಣಕ್ಕೆ ಕ್ರೀಡಾ ಇಲಾಖೆಯಿಂದ ₹3 ಕೋಟಿ ಹಾಗೂ ಪುರಸಭೆಯ ನಗರೋತ್ಥಾನ ಯೋಜನೆ ಅಡಿ ₹75 ಲಕ್ಷ ಅನುದಾನ ನೀಡಲಾಗಿದೆ. ಷಟಲ್ ಬ್ಯಾಡ್ಮಿಂಟನ್, ಕೇರಂ, ಟೇಬಲ್ ಟೆನಿಸ್, ಪುರುಷರ ಜಿಮ್ ಮುಂತಾದ ಕ್ರೀಡೆಗಳನ್ನು ನಡೆಸಲು ಕೋರ್ಟ್‌ಗಳನ್ನು ನಿರ್ಮಿಸಲಾಗುವುದು. ಈ ಕ್ರೀಡಾಂಗಣಕ್ಕೆ ಅನುಭವಿ ತರಬೇತುದಾರನ್ನು ನೇಮಿಸಿ, ಕ್ರೀಡಾಪಟುಗಳಿಗೆ ಉತ್ತಮ ತರಬೇತಿಯನ್ನು ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಪುರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ನರಸಿಂಹಮೂರ್ತಿ, ಸದಸ್ಯರಾದ ಗುರುಸಿದ್ದಯ್ಯ, ನಂಜುಂಡಪ್ಪ, ಅಣ್ಣಯ್ಯ, ಕ್ರೀಡಾಪಟುಗಳಾದ ಕೆ.ಆರ್. ಗೋಪಿ, ಶ್ರೀನಿವಾಸ್, ಕೆ.ಪಿ.ಎಂ.ಸ್ವಾಮಿ, ಮಧು, ತಾಲ್ಲೂಕು ಕ್ರೀಡಾಧಿಕಾರಿ ಜೆ.ರಾಮಲಿಂಗಪ್ಪ, ಗೌ.ಹಾಲೇಶ್, ನಿರ್ಮಲಾ ಬಾಯಿ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು